ಕೆ.ಆರ್.ಪುರ: ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಪ್ರಚಾರ ಸಮಿತಿ ವತಿಯಿಂದ ಎಸ್ಸಿ, ಎಸ್ಟಿ ಅಸ್ಪ್ರಶ್ಯತಾ ನಿವಾರಣೆ, ದೌರ್ಜನ್ಯ ತಡೆ ಕಾಯ್ದೆ, ಇಲಾಖೆಯ ಸೌಲಭ್ಯಗಳ ಕುರಿತು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು.

ಪೂರ್ವ ತಾಲ್ಲೂಕು ತಹಶೀಲ್ದಾರ್ ರಾಜೀವ್ ಅವರು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ‘ಯಾವುದೇ ಜಾತಿ ವಿರುದ್ಧ ದೌರ್ಜನ್ಯ ಎಸಗುವ ಅಧಿಕಾರ ಯಾರಿಗೂ ಇಲ್ಲ. ಅಂಥ ಪ್ರಕರಣ ಕಂಡು ಬಂದರೆ ಮುಲಾಜಿಲ್ಲದೆ ಕ್ರಮ ವಹಿಸಬೇಕಾಗುತ್ತದೆ. ಅಸ್ಪ್ರಶ್ಯತೆ ಕಂಡು ಬಂದರೆ ಕಾನೂನಿನ ಚೌಕಟ್ಟಿನಲ್ಲಿ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ’ ಎಂದರು.

ಡಾ.ಬಿ.ಆರ್..ಅಂಬೇಡ್ಕರ್ ಪ್ರಚಾರ ಸಮಿತಿ ಸಂಸ್ಥಾಪಕ ಅಧ್ಯಕ್ಷ ಅರುಣ್ ಮಾತನಾಡಿ, ‘ಹೆಚ್ಚುತ್ತಿರುವ ದೌರ್ಜನ್ಯಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಜಾಥಾ ಹಮ್ಮಿಕೊಳ್ಳಲಾಗಿದೆ. ಕೆ.ಆರ್.ಪುರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ’ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ನಗರ ಜಂಟಿ ನಿರ್ದೇಶಕ ಲಕ್ಷ್ಮಣ್ ರೆಡ್ಡಿ, ತಾಲ್ಲೂಕು ಸಹಾಯಕ ನಿರ್ದೇಶಕರಾದ ಭವಿಷ್ಯ, ಮಾರ್ಟಿನ್, ಯಶ್ ಪವರ್, ಅರವಿಂದ್ ಅಗ್ನಿ, ಲೋಕೇಶ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.