ಬೆಂಗಳೂರು: ಅಯೋಧ್ಯೆಯಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಸೋಮವಾರ ನಡೆಯುವುದರಿಂದ ಸಂಜೆ ಸೂರ್ಯಾಸ್ತದ ಬಳಿಕ ಮನೆಗಳ ಮುಂದೆ ಮತ್ತು ದೇವಸ್ಥಾನಗಳಲ್ಲಿ ದೀಪೋತ್ಸವವನ್ನು ಆಚರಿಸುವಂತೆ ವಿಶ್ವ ಹಿಂದೂ ಪರಿಷತ್ ಮನವಿ ಮಾಡಿಕೊಂಡಿದೆ.

‘ಸುಮಾರು 500 ವರ್ಷಗಳ ಸಂಘರ್ಷದ ನಂತರ ಭಾರತದ ಪುಣ್ಯಭೂಮಿ ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣವಾಗಿದೆ. ರಾಮನ ಜನ್ಮ ಸ್ಥಳದಲ್ಲಿಯೇ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಈ ದಿನವನ್ನು ಒಂದು ರಾಷ್ಟ್ರೀಯ ಉತ್ಸವವನ್ನಾಗಿ ಆಚರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ವಿವಿಧ ದೇವಸ್ಥಾನಗಳಲ್ಲಿ ಹೋಮ, ಯಜ್ಞ, ಪೂಜೆ, ಜಪ, ಭಜನೆ ಸೇರಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ. ಅಯೋಧ್ಯೆಯಲ್ಲಿ ನಡೆಯುವ ಪ್ರಾಣ ಪ್ರತಿಷ್ಠಾಪನೆಯ ನೇರ ಪ್ರಸಾರ ವೀಕ್ಷಣೆಗೆ ನಗರದ ಹಲವು ದೇವಸ್ಥಾನಗಳಲ್ಲಿ ಎಲ್‌ಇಡಿ ಪರದೆಗಳನ್ನು ಸಿದ್ಧಪಡಿಸಲಾಗಿದೆ’ ಎಂದು ಪರಿಷತ್ತಿನ ಪ್ರಾಂತ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ತಿಳಿಸಿದ್ದಾರೆ.

‘ರಾಜ್ಯದಲ್ಲಿ ಮುಜರಾಯಿ ಇಲಾಖೆಯ ಅಧೀನದಲ್ಲಿ ಬರುವ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ಏರ್ಪಡಿಸುವಂತೆ ರಾಜ್ಯ ಸರ್ಕಾರವೇ ಸೂಚಿಸಿದೆ. ಪ್ರಾಣ ಪ್ರತಿಷ್ಠಾಪನೆಯನ್ನು ದೇವಸ್ಥಾನಗಳಿಗೆ ತೆರಳಿ, ವೀಕ್ಷಿಸಲು ಸಾಧ್ಯವಾಗದ ಉದ್ಯೋಗಸ್ಥರು, ವಿದ್ಯಾರ್ಥಿಗಳು ಸೇರಿ ವಿವಿಧ ವರ್ಗದವರಿಗೆ ಸಂಘ–ಸಂಸ್ಥೆಗಳು, ಶಾಲಾ–ಕಾಲೇಜುಗಳ ಆಡಳಿತ ಮಂಡಳಿ, ಸರ್ಕಾರಿ ಕಚೇರಿಗಳು, ಕಂಪನಿಗಳು ವ್ಯವಸ್ಥೆ ಮಾಡಿಕೊಡಬೇಕು’ ಎಂದು ಮನವಿ ಮಾಡಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.