ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಣವಾನಂದ ಸ್ವಾಮೀಜಿಗೂ ನಮಗೂ ಸಂಬಂಧವಿಲ್ಲ: ಈಡಿಗರ ಸಂಘದ ಅಧ್ಯಕ್ಷ ಎಂ.ತಿಮ್ಮೇಗೌಡ

Published 20 ಸೆಪ್ಟೆಂಬರ್ 2023, 10:11 IST
Last Updated 20 ಸೆಪ್ಟೆಂಬರ್ 2023, 10:11 IST
ಅಕ್ಷರ ಗಾತ್ರ

ಬೆಂಗಳೂರು: ‘ಸ್ವಯಂಘೋಷಿತ ಪ್ರಣವಾನಂದ ಸ್ವಾಮೀಜಿಗೂ ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ. ತಿಮ್ಮೇಗೌಡ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸ್ವಯಂಘೋಷಿತ ಸ್ವಾಮೀಜಿ ಎಂದು ಹೇಳಿಕೊಂಡು ತಿರುಗುತ್ತಿರುವ ಪ್ರಣವಾನಂದ ಸ್ವಾಮೀಜಿ ಸಮುದಾಯದಲ್ಲಿ ಒಡಕು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ರಾಜಕೀಯ ಮುಖಂಡರಲ್ಲಿ ಭಿನ್ನಾಭಿಪ್ರಾಯ ಮೂಡಿಸುವ ಮೂಲಕ ರಾಜಕೀಯ ಕ್ಷೇತ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಿದ್ದಾರೆ. ಜತೆಗೆ ಕೇಂದ್ರ ಆರ್ಯ ಈಡಿಗರ ಸಂಘದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಧಾರರಹಿತ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ’ ಎಂದು ದೂರಿದರು.

‘ಈಡಿಗ ಸಮುದಾಯದಲ್ಲಿ ಬಿಲ್ಲವ ನಾಮದಾರಿ ಸೇರಿ 26 ಪಂಗಡಗಳಿವೆ. ಸೋಲೂರಿನಲ್ಲಿರುವ ಆರ್ಯ ಈಡಿಗ ಮಹಾಸಂಸ್ಥಾನ ಮಠಕ್ಕೆ 2022ರ ಫೆ. 2ರಂದು ವಿಖ್ಯಾತನಂದ ಸ್ವಾಮೀಜಿ ಅವರನ್ನು ಪೀಠಾಧಿಪತಿಯನ್ನಾಗಿ ಮಾಡಲಾಗಿದೆ. ಅವರ ನಿರ್ದೇಶನದಂತೆ ನಮ್ಮ ಸಮುದಾಯ ಕಾರ್ಯನಿರ್ವಹಿಸುತ್ತಿದೆ’ ಎಂದು ಸ್ಪಷ್ಟಪಡಿಸಿದರು.

‘ಪ್ರಣವಾನಂದ ಸ್ವಾಮೀಜಿ ಈ ಸಮುದಾಯವನ್ನು ಎರಡು ಪಂಗಡಗಳನ್ನಾಗಿ ವಿಂಗಡಿಸುವ ಕೆಲಸ ಮಾಡುತ್ತಿದ್ದಾರೆ. ಇದು ಸಮುದಾಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂಬ ಉದ್ದೇಶದಿಂದ 2023ರ ಸೆ. 15ರಂದು ನಡೆದ ಸಭೆಯಲ್ಲಿ ಸಂಘದ ಪರವಾಗಿ ಸ್ಪಷ್ಟನೆ ಮತ್ತು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಅವರಿಗೂ ಮತ್ತು ಸಂಘಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ’ ಎಂದು ತಿಳಿಸಿದರು.

ಸಂಘ ಉಪಾಧ್ಯಕ್ಷ ಟಿ. ಶಿವಕುಮಾರ್, ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿ ಸಂಪತ್‌ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT