ಬೆಂಗಳೂರು: ಮಕ್ಕಳಾಗದ ದಂಪತಿಗಳಿಗೆ ಸಂತಾನೋತ್ಪತ್ತಿ ಚಿಕಿತ್ಸೆಗಳನ್ನು ‘ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ– ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ’ ತರಲಾಗಿದೆ.

ಈ ಸಂಬಂಧ ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ಈ ಆದೇಶ ಒಂದು ವರ್ಷ ಮಾತ್ರ ಜಾರಿಯಲ್ಲಿ ಇರಲಿದೆ. ಯೋಜನೆಯಡಿ ಬಿಪಿಎಲ್ ಕುಟುಂಬದ 120 ದಂಪತಿಗೆ ಮಾತ್ರ ಈ ಚಿಕಿತ್ಸೆಗೆ ಅನುಮೋದನೆ ದೊರೆತಿದೆ.

‘ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿ’ (ಎಆರ್ಟಿ) ಮೂಲಕ ದಂಪತಿಗಳಿಗೆ ಸಂತಾನೋತ್ಪತ್ತಿ ಚಿಕಿತ್ಸೆ ನೀಡಲಾಗುತ್ತದೆ. ಖಾಸಗಿ ವ್ಯವಸ್ಥೆಯಡಿ ಈ ಚಿಕಿತ್ಸೆ ದುಬಾರಿಯಾಗಿರುವುದರಿಂದ ಯೋಜನೆಯಡಿ ಸೇರ್ಪಡೆ ಮಾಡಲಾಗಿದೆ. ಐವಿಎಫ್ ಸೇರಿ ವಿವಿಧ ವಿಧಾನಗಳ ಮೂಲಕ ಆಯ್ದ ದಂಪತಿಗೆ ಈ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

ಜಿಲ್ಲಾ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳು, ಸ್ವಾಯತ್ತ ಆರೋಗ್ಯ ಸಂಸ್ಥೆಗಳು ಹಾಗೂ ಯೋಜನೆಯಡಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಒದಗಿಸಲಾಗುತ್ತದೆ ಎಂದು ಆದೇಶ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.