ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಜೀಮ್ ಪ್ರೇಮ್‌ಜಿ ವಿರುದ್ಧ ಅರ್ಜಿ ಸಲ್ಲಿಸಿದವರಿಗೆ ದಂಡ

Last Updated 20 ಫೆಬ್ರುವರಿ 2021, 20:57 IST
ಅಕ್ಷರ ಗಾತ್ರ

ಬೆಂಗಳೂರು: ಬ್ಯಾಂಕೇತರ ಹಣಕಾಸು ವ್ಯವಹಾರ ನಡೆಸುತ್ತಿರುವ ಕಾರಣ ಉದ್ಯಮಿ ಅಜೀಮ್ ಪ್ರೇಮ್‌ಜಿ ವಿರುದ್ಧ ತನಿಖೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಳಿಸಿರುವ ಹೈಕೊರ್ಟ್‌, ಪದೇ ಪದೇ ಅರ್ಜಿ ಸಲ್ಲಿಸಿದ ಕಾರಣಕ್ಕೆ ಅರ್ಜಿದಾರರಿಗೆ ₹10 ಲಕ್ಷ ದಂಡ ವಿಧಿಸಿದೆ.

ಇಂಡಿಯನ್ ಅವೇಕ್ ಫಾರ್ ಟ್ರಾನ್ಸ್‌ಪರೆನ್ಸಿ ಸಂಸ್ಥೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್‌ ಕುಮಾರ್ ಅವರಿದ್ದ ಪೀಠ, ಈ ಆದೇಶ ನೀಡಿದೆ.

ಕಾನೂನು ಬಾಹಿರವಾಗಿ ಬ್ಯಾಂಕೇತರ ಹಣಕಾಸು ವ್ಯವಹಾರ ನಡೆಸಲಾಗುತ್ತಿದೆ. ಆರ್‌ಬಿಐ ಕಾಯ್ದೆಯಡಿ ಕ್ರಿಮಿನಲ್ ಕ್ರಮ ತೆಗೆದುಕೊಳ್ಳಬೇಕು ಎಂದು ಅರ್ಜಿದಾರರು ಕೋರಿದ್ದರು. ಈ ಅರ್ಜಿಯನ್ನು ಜನವರಿಯಲ್ಲಿ ಹೈಕೋರ್ಟ್ ವಜಾಗೊಳಿಸಿತ್ತು.

‘ಅರ್ಜಿದಾರರ ದೂರಿಗೆ ಆರ್‌ಬಿಐ ಕೂಡ 2017ರಲ್ಲಿ ಉತ್ತರ ನೀಡಿದೆ. ಈ ಬಗ್ಗೆ ಬೇರೆ ತಕಾರು ಇದ್ದರೆ ಸೂಕ್ತ ವೇದಿಕೆಯಲ್ಲಿ ಪರಿಹರಿಸಿಕೊಳ್ಳಬಹುದು. ಪದೇ ಪದೇ ನ್ಯಾಯಾಲಯಗಳಿಗೆ ಅರ್ಜಿ ಸಲ್ಲಿಸುವ ಮೂಲಕ ಸಮಯ ವ್ಯರ್ಥ ಮಾಡಲಾಗುತ್ತಿದೆ. ನ್ಯಾಯಾಂಗ ದುರ್ಬಳಕೆ ಮಾಡಲಾಗುತ್ತಿದೆ’ ಎಂದು ಅಭಿಪ್ರಾಯಿಸಿದ ಪೀಠ, ದಂಡ ವಿಧಿಸಿ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT