ಬೆಂಗಳೂರು ದಕ್ಷಿಣಕ್ಕೆ ಬಿ.ಕೆ.ಹರಿಪ್ರಸಾದ್‌ ‘ಕೈ’ ಅಭ್ಯರ್ಥಿ

ಸೋಮವಾರ, ಏಪ್ರಿಲ್ 22, 2019
29 °C

ಬೆಂಗಳೂರು ದಕ್ಷಿಣಕ್ಕೆ ಬಿ.ಕೆ.ಹರಿಪ್ರಸಾದ್‌ ‘ಕೈ’ ಅಭ್ಯರ್ಥಿ

Published:
Updated:

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಹಾಲಿ ರಾಜಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಲಿದೆ.

ಶನಿವಾರ ತಡರಾತ್ರಿ ಪ್ರಕಟಿಸಿದ ಪಟ್ಟಿಯಲ್ಲಿ ಧಾರವಾಡ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರದ ಹೆಸರನ್ನು ಕಾಂಗ್ರೆಸ್‌ ಪ್ರಕಟಿಸಿರಲಿಲ್ಲ. ಬಿಹಾರ, ಮಹಾರಾಷ್ಟ್ರ ತಲಾ ಮೂರು, ಜಮ್ಮು ಮತ್ತು ಕಾಶ್ಮೀರ, ತಮಿಳುನಾಡು ಮತ್ತು ಕರ್ನಾಟಕದ ತಲಾ ಒಂದು ಕ್ಷೇತ್ರಗಳ ಅಭ್ಯರ್ಥಿ ಹೆಸರನ್ನು ಕಾಂಗ್ರೆಸ್‌ ಭಾನುವಾರ ಸಂಜೆ ಪ್ರಕಟಿಸಿದೆ.

ಬೆಂಗಳೂರು ಉತ್ತರ ಮತ್ತು ಮಂಗಳೂರು ಕ್ಷೇತ್ರದಿಂದ ಹರಿಪ್ರಸಾದ್‌ ಟಿಕೆಟ್ಗ್ ಆಕಾಂಕ್ಷಿ ಆಗಿದ್ದರು. ಆದರೆ, ಅವರನ್ನು ಬಿಜೆಪಿ ಪ್ರಾಬಲ್ಯದ ಬೆಂಗಳೂರು ದಕ್ಷಿಣದಿಂದ ಕಣಕ್ಕಿಳಿಸುವ ಮೂಲಕ ಸವಾಲೊಡ್ಡಲು ಕಾಂಗ್ರೆಸ್‌ ಮುಂದಾಗಿದೆ.

ಧಾರವಾಡ ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಕಾಂಗ್ರೆಸ್ ಇನ್ನೂ ಅಂತಿಮಗೊಳಿಸಿಲ್ಲ. ಈ ಕ್ಷೇತ್ರಕ್ಕೆ ಮಾಜಿ ಸಚಿವ ವಿನಯ ಕುಲಕರ್ಣಿ, ಶಾಕೀರ್‌ ಸನದಿ ಮತ್ತು ಸದಾನಂದ ಡಂಗಣವರ ಆಕಾಂಕ್ಷಿಗಳಾಗಿದ್ದು, ಟಿಕೆಟ್‌ ಗಿಟ್ಟಿಸಲು ಪ್ರಬಲ ಲಾಬಿ ನಡೆಯುತ್ತಿದೆ ಎನ್ನಲಾಗಿದೆ.

Tags: 

ಬರಹ ಇಷ್ಟವಾಯಿತೆ?

 • 11

  Happy
 • 2

  Amused
 • 0

  Sad
 • 0

  Frustrated
 • 3

  Angry

Comments:

0 comments

Write the first review for this !