ಬೆಂಗಳೂರು: ಪೊಲಿಟಿಕಲ್ ಆ್ಯಕ್ಷನ್ ಕಮಿಟಿಯಿಂದ (ಬಿ–ಪ್ಯಾಕ್) ರಾಜಕೀಯ ಕ್ಷೇತ್ರದಲ್ಲಿ ಆಸಕ್ತಿ ಇರುವವರಿಗಾಗಿ ಬಿ–ಪ್ಯಾಕ್ ನಾಗರಿಕ ನಾಯಕತ್ವ ತರಬೇತಿ (ಬಿ–ಕ್ಲಿಪ್) ಕಾರ್ಯಕ್ರಮದ 10ನೇ ಆವೃತ್ತಿಗೆ ಅರ್ಜಿ ಆಹ್ವಾನಿಸಿದೆ.

ರಾಜಕೀಯ, ನಗರ ಆಡಳಿತ, ನೀತಿ ನಿರೂಪಣೆ, ನಾಯಕತ್ವ, ಚುನಾವಣಾ ಕಾರ್ಯತಂತ್ರ, ಮಾಧ್ಯಮ ನಿರ್ವಹಣೆ ಸೇರಿದಂತೆ ನಾಗರಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಅಗತ್ಯವಿರುವ ಎಲ್ಲಾ ರೀತಿಯ ಅರ್ಹತೆಯನ್ನು ಈ ತರಬೇತಿಯಲ್ಲಿ ನೀಡಲಾಗುತ್ತದೆ ಎಂದು ಬಿ.ಕ್ಲಿಪ್ ಕಾರ್ಯಕ್ರಮದ ಮುಖ್ಯಸ್ಥ ಹೆಚ್.ಎಸ್. ರಾಘವೇಂದ್ರ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆ ದಿನ. ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿದ್ದು, ಈ ಚುನಾವಣೆಯಲ್ಲಿ ಸ್ಪರ್ಧಿಸುವವರೂ ಇಲ್ಲಿ ತರಬೇತಿ ಪಡೆದು, ಸೂಕ್ತ ರೀತಿಯಲ್ಲಿ ಆಡಳಿತ ನಡೆಸಲು ಅನುಭವ ಪಡೆದುಕೊಳ್ಳಬಹುದು.

ಆಸಕ್ತರು www.bpac.in ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ, +91- 63648 56147, 080-41521797 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.