ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೇವೇಗೌಡರಿಂದ ಹತಾಶ ಸ್ಥಿತಿಯ ಪ್ರದರ್ಶನ’

Published 19 ಏಪ್ರಿಲ್ 2024, 18:18 IST
Last Updated 19 ಏಪ್ರಿಲ್ 2024, 18:18 IST
ಅಕ್ಷರ ಗಾತ್ರ

ಬೆಂಗಳೂರು: ‘ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರ ಪತನಗೊಳ್ಳುತ್ತದೆ ಎನ್ನುವ ಮೂಲಕ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡರು ತಮ್ಮ ರಾಜಕೀಯ ಹತಾಶ ಸ್ಥಿತಿಯನ್ನು ಪ್ರದರ್ಶಿಸಿದ್ದಾರೆ’ ಎಂದು ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ಬಿ.ಎಸ್‌. ಶಿವಣ್ಣ ಟೀಕಿಸಿದ್ದಾರೆ.

ದೇವೇಗೌಡರ ಹೇಳಿಕೆ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳ ಸುನಾಮಿಯಿಂದ ದೇವೇಗೌಡರು ಹೆದರಿದ್ದಾರೆ. ಈ ಕಾರಣದಿಂದ ಬಿಜೆಪಿಯಲ್ಲಿ ವಿಲೀನವಾಗಿದ್ದಾರೆ. ಬಿಜೆಪಿ ಜತೆಗಿನ ಮೈತ್ರಿಯಿಂದ ತಮಗೆ ಆನೆ ಬಲ ಬಂದಿದೆ ಎಂಬ ಭ್ರಮೆಯಲ್ಲಿ ದೃತರಾಷ್ಟ್ರನ ಅಂಧ ಪ್ರೇಮವನ್ನು ವ್ಯಕ್ತಪಡಿಸುತ್ತಿದ್ದಾರೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT