ಮಂಗಳವಾರ, ಡಿಸೆಂಬರ್ 7, 2021
19 °C

ಸ್ಯಾಂಕಿ ಕೆರೆಗೆ ಬಾಗಿನ ಅರ್ಪಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮಳೆಯಿಂದ ಸಂಪೂರ್ಣವಾಗಿ ಭರ್ತಿಯಾಗಿರುವ ಮಲ್ಲೇಶ್ವರದ ಸ್ಯಾಂಕಿ ಕೆರೆಗೆ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥನಾರಾಯಣ ಅವರು ಗುರುವಾರ ಬಾಗಿನ ಅರ್ಪಿಸಿದರು.

ಬಳಿಕ ಮಾತನಾಡಿದ ಸಿ.ಎನ್.ಅಶ್ವತ್ಥನಾರಾಯಣ,‘ಸ್ಯಾಂಕಿ ಕೆರೆಗೆ ಮೊದಲು ಕೊಳಚೆ ನೀರು ಸೇರುತ್ತಿತ್ತು. ಈಗ ವೈಜ್ಞಾನಿಕ ವಿಧಾನಗಳನ್ನು ಅನುಸರಿಸಿ, ಶುದ್ಧವಾದ ನೀರು ಮಾತ್ರ ಕೆರೆಯ ಒಡಲು ಸೇರುವಂತೆ ಕ್ರಮ ಕೈಗೊಳ್ಳಲಾಗಿದೆ’ ಎಂದರು.

‘ಕೆರೆಯ ಸುತ್ತಮುತ್ತಲ ಹಲವು ರಸ್ತೆಗಳಲ್ಲಿನ ಕಾಲುವೆಗಳು ಮುಚ್ಚಿಹೋಗಿದ್ದರಿಂದ ಇತ್ತೀಚಿನ ವರ್ಷಗಳಲ್ಲಿ ಸ್ಯಾಂಕಿ ಕೆರೆಗೆ ನೀರು ಬರುವುದು ಕಡಿಮೆಯಾಗಿತ್ತು. ಇಲ್ಲಿನ ನೀರೆಲ್ಲ ವೃಷಭಾವತಿ ಕಣಿವೆಯ ಕಡೆಗೆ ಹರಿದು ಹೋಗುತ್ತಿತ್ತು. ಈಗ ಕೆರೆಗೆ ನೀರು ಬರುವಂತೆ ಮಾಡಲಾಗಿದೆ. ಸದಾಶಿವನಗರ ಬಡಾವಣೆಯ ಕಡೆಯಿಂದ ಬರುವ ಮಳೆನೀರು ಕೂಡ ಅಗತ್ಯ ಪ್ರಮಾಣದಲ್ಲಿ ಕೆರೆಯಂಗಳ ಸೇರುವಂತೆ ಕ್ರಮ ಕೈಗೊಳ್ಳಲಾಗಿದೆ’ ಎಂದು ವಿವರಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು