ನೆಲಮಂಗಲ: ಒಕ್ಕಲಿಗ ಸಂಘದವರು ಕೆಂಪೇಗೌಡರ ಪುತ್ಥಳಿ ಹಾಗೂ ಭವನ ನಿರ್ಮಾಣ ಮಾಡಲು ಮುಂದಾಗಬೇಕು. ಇದಕ್ಕೆ ಸಂಸದರ ನಿಧಿಯಿಂದ ನೆರವು ನೀಡಲಾಗುವುದು ಎಂದು ಸಂಸದ ಬಚ್ಚೇಗೌಡ ಭರವಸೆ ನೀಡಿದರು.

ತಾಲ್ಲೂಕು ಒಕ್ಕಲಿಗರ ಕ್ಷೇಮಾಭಿವೃದ್ಧಿ ಟ್ರಸ್ಟ್‌ನ ವಾರ್ಷಿಕೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ಗುರುವಂದನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ‘ಪೋಷಕರು ಮಕ್ಕಳ ಚಲನವಲನಗಳ ಮೇಲೆ ಹೆಚ್ಚಿನ ನಿಗಾ ಇಡಬೇಕು. ಅವರಲ್ಲಿ ಸ್ಪರ್ಧೆ ಎದುರಿಸುವ ಶಕ್ತಿ ತುಂಬಬೇಕಿದೆ ಎಂದರು.

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ 210 ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. 20 ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಯಿತು ಎಂದು ಟ್ರಸ್ಟ್ ಅಧ್ಯಕ್ಷ ಎಚ್.ಜಿ.ರಾಜು ತಿಳಿಸಿದರು.

ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ನಂಜಾವಧೂತ ಸ್ವಾಮೀಜಿ, ಶಿವಾನಂದ ಆಶ್ರಮದ ರಮಣಾನಂದ ಸ್ವಾಮೀಜಿ, ಜಿಲ್ಲಾಧಿಕಾರಿ ಕರಿಗೌಡ, ಜಯದೇವ ಹೃದ್ರೋಗ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಚಿಕ್ಕತಿಮ್ಮಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.