ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜನಾಂದೋಲನಕ್ಕೆ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಬೆಂಬಲ

Published 8 ಆಗಸ್ಟ್ 2024, 16:23 IST
Last Updated 8 ಆಗಸ್ಟ್ 2024, 16:23 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಶುಕ್ರವಾರ ಮೈಸೂರಿನಲ್ಲಿ ನಡೆಯುವ ಜನಾಂದೋಲನಕ್ಕೆ ಹಿಂದುಳಿದ ವರ್ಗಗಳ 197 ಜಾತಿಗಳ ಬೆಂಬಲವಿದ್ದು, ಸಮುದಾಯದ ಎಲ್ಲ ಮುಖಂಡರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ತಿಳಿಸಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಎಂ.ಸಿ. ವೇಣುಗೋಪಾಲ್, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೌರವಕ್ಕೆ ಧಕ್ಕೆ ತರಬೇಕು ಎಂಬ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಪಾದಯಾತ್ರೆ ಮಾಡುತ್ತಿದ್ದಾರೆ’ ಎಂದು ದೂರಿದರು.

‘ಆರ್‌ಟಿಐ ಕಾರ್ಯಕರ್ತ ನೀಡಿದ ದೂರನ್ನು ಆಧರಿಸಿ ರಾಜ್ಯಪಾಲರು ಮುಖ್ಯಮಂತ್ರಿಯವರಿಗೆ ಶೋಕಾಸ್‌ ನೋಟಿಸ್‌ ನೀಡಿರುವುದು ಕಾನೂನುಬಾಹಿರ. ಈ ಬಗ್ಗೆ ರಾಜ್ಯಪಾಲರನ್ನು ಭೇಟಿಯಾಗಿ ಮನವರಿಕೆ ಮಾಡಲಾಗುವುದು’ ಎಂದು ತಿಳಿಸಿದರು.

‘ಸಿದ್ದರಾಮಯ್ಯ ಅವರು ಎರಡು ಅವಧಿಯಲ್ಲಿ ಜನ‍ಪರ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಅವರ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆ ಇಲ್ಲದಂತೆ ಸರ್ವರಿಗೆ ಸಮಪಾಲು, ಸರ್ವರಿಗೆ ಸಮಬಾಳು ಎಂಬ ಬಸವಣ್ಣನವರ ತತ್ವದಂತೆ ಸೇವೆ ಸಲ್ಲಿಸಿದ್ದಾರೆ. ಸಂವಿಧಾನಾತ್ಮಕ ಹುದ್ದೆಯಲ್ಲಿ ಇರುವ ರಾಜ್ಯಪಾಲರು ಏಕಪಕ್ಷೀಯವಾಗಿ ವರ್ತಿಸಬಾರದು’ ಎಂದು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT