ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲೂರು ಗ್ರಾ.ಪಂ ಅಧ್ಯಕ್ಷರಾಗಿ ಹಮೀದಾ

Last Updated 22 ಜನವರಿ 2022, 17:35 IST
ಅಕ್ಷರ ಗಾತ್ರ

ಯಲಹಂಕ: ತಾಲ್ಲೂಕಿನ ಜಾಲ ಹೋಬಳಿಯ ಬಾಗಲೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಹಮೀದಾ ಹಾಗೂ ಉಪಾಧ್ಯಕ್ಷರಾಗಿ ಬಿ.ಸಿ.ಲೋಕೇಶ್ ಆಯ್ಕೆಯಾಗಿದ್ದಾರೆ.

ಸಾಮಾನ್ಯ(ಮಹಿಳೆ)ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಹಮೀದಾ ಮತ್ತು ಹೇಮಲತಾ. ಆರ್ ಸ್ಪರ್ಧಿಸಿದ್ದರು.

ಒಟ್ಟು 26 ಸದಸ್ಯ ಬಲ ಹೊಂದಿರುವ ಪಂಚಾಯಿತಿಯಲ್ಲಿ ಹಮೀದಾ ಅವರು 17 ಹಾಗೂ ಹೇಮಲತಾ ಅವರು 9 ಮತಗಳನ್ನು ಪಡೆದರು.

ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಲೋಕೇಶ್ 20 ಮತಗಳನ್ನು ಪಡೆದರು. ಇವರ ವಿರುದ್ಧ ಸ್ಪರ್ಧಿಸಿದ್ದ ಸಂತೋಷ್ ಕುಮಾರ್.ಬಿ 6 ಮತಗಳನ್ನು ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT