ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಜ್ರಿವಾಲ್‌ಗೆ ಜಾಮೀನು: ಸರ್ವಾಧಿಕಾರಿಗಳ ಸೊಕ್ಕು ಅಡಗಿದೆ:‘ಮುಖ್ಯಮಂತ್ರಿ’ ಚಂದ್ರು

ಕೇಜ್ರಿವಾಲ್‌ಗೆ ಜಾಮೀನು, ಎಎಪಿ ಕಚೇರಿಯಲ್ಲಿ ಸಂಭ್ರಮ
Published 10 ಮೇ 2024, 15:38 IST
Last Updated 10 ಮೇ 2024, 15:38 IST
ಅಕ್ಷರ ಗಾತ್ರ

ಬೆಂಗಳೂರು: ‘ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಸತ್ಯಕ್ಕೆ ಸಂದ ಗೆಲುವಾಗಿದೆ. ಇದು ಪ್ರಜಾಪ್ರಭುತ್ವದ ಗೆಲುವಾಗಿದೆ’ ಎಂದು ಎಎಪಿ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಹರ್ಷ ವ್ಯಕ್ತಪಡಿಸಿದರು.

‘ಪ್ರಧಾನಿ ನರೇಂದ್ರ ಮೋದಿ ಅವರ ಸೋಲಿನ ಮುನ್ಸೂಚನೆ ಇದಾಗಿದೆ. ಸರ್ವಾಧಿಕಾರಿಯ ಸೊಕ್ಕು ಅಡಗಿದೆ. ಈ ಬಾರಿಯ ಚುನಾವಣೆಯಲ್ಲಿ ಕೇಜ್ರಿವಾಲ್ ಅಲೆಯನ್ನು ತಡೆಯಲು ಪ್ರಧಾನಿ ಮೋದಿಗೆ ಇನ್ಯಾವ ದಾರಿಯೂ ಉಳಿದಿಲ್ಲ. ಇಂಡಿಯಾ ಒಕ್ಕೂಟದ ಗೆಲುವನ್ನು ತಡೆಯುವ ಮೋದಿ ಅವರ ಹುನ್ನಾರ ನುಚ್ಚುನೂರಾಗಿದೆ. ಮೇ 25ರಂದು ದೆಹಲಿಯಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಕೇಜ್ರಿವಾಲ್ ಅವರ ಉಪಸ್ಥಿತಿಯಿಂದ ಇಂಡಿಯಾ ಒಕ್ಕೂಟ 7ಕ್ಕೆ 7 ಸ್ಥಾನವನ್ನು ಗೆಲ್ಲಲಿದೆ’ ಎಂದು ಹೇಳಿದರು.

‘ಚುನಾವಣೆಯಲ್ಲಿ ಎಎಪಿಯನ್ನು ಕಟ್ಟಿಹಾಕುವ ಸಲುವಾಗಿ ಚುನಾವಣೆಯ ಹೊಸ್ತಿಲಲ್ಲಿ ಕೇಜ್ರಿವಾಲ್ ಅವರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಿ ಬಂಧಿಸಿದರು ಎಂಬ ಸತ್ಯ ಭಾರತದ ಜನತೆಗೆ ಅರಿವಾಗಿದೆ. ಮೂರು ಬಾರಿ ಪ್ರಚಂಡ ಬಹುಮತದಿಂದ ಗೆದ್ದಿರುವ ಕೇಜ್ರಿವಾಲ್ ಅವರನ್ನು ಬಂಧಿಸುವ ಮೂಲಕ ಪ್ರಜಾಪ್ರಭುತ್ವದ ವಿರುದ್ಧ ಅಣಕವಾಡಿದ್ದ ಮೋದಿಗೆ ತಕ್ಕ ಶಾಸ್ತಿಯಾಗುವ ದಿನಗಳು ಹತ್ತಿರವಾಗಿವೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

‘ಕೇಜ್ರಿವಾಲ್ ಹೊರಬರುತ್ತಿರುವ ವಿಚಾರವು ಬಿಜೆಪಿಗೆ ನಡುಕ ಹುಟ್ಟಿಸಿದೆ. 3 ಹಂತದ ಮತದಾನ ಮುಗಿದಿರುವ ಈ ಸಂದರ್ಭದಲ್ಲೇ ಸೋಲಿನ ಭೀತಿಯಲ್ಲಿ ಮಾನಸಿಕ ಅಸ್ವಸ್ಥರಂತೆ ಭಾಷಣ ಮಾಡುತ್ತಿರುವ ಮೋದಿ ಅವರು ಕೇಜ್ರಿವಾಲ್ ಬಿಡುಗಡೆಯಿಂದ ಸಂಪೂರ್ಣ ಸ್ಥಿಮಿತ ಕಳೆದುಕೊಳ್ಳಲಿದ್ದಾರೆ. ಕೇಜ್ರಿವಾಲ್ ಬಿಡುಗಡೆಯಿಂದ ಇನ್ನುಳಿದ ನಾಲ್ಕು ಹಂತಗಳ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಇಂಡಿಯಾ ಅಭ್ಯರ್ಥಿಗಳಲ್ಲಿ ಗೆಲುವಿನ ವಿಶ್ವಾಸವನ್ನು ಹೆಚ್ಚಿಸಿದೆ’ ಎಂದು ಚಂದ್ರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT