ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಮೊಹಮದ್ ನಲಪಾಡ್‌ನ ಐವರು ಸಹಚರರಿಗೆ ನಗರದ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ನಾಲ್ಕು ತಿಂಗಳಿನಿಂದ ಜೈಲಿನಲ್ಲಿದ್ದ ಮಂಜುನಾಥ್, ಮೊಹಮದ್ ಅಶ್ರಫ್, ನಾಸಿರ್, ಅರುಣ್ ಬಾಬು ಹಾಗೂ ಬಾಲಕೃಷ್ಣನಿಗೆ ಶನಿವಾರ ಜಾಮೀನು ನೀಡಿದ ನ್ಯಾಯಾಲಯ, ವಿಚಾರಣೆಗೆ ಸರಿಯಾಗಿ ಹಾಜರಾಗಬೇಕು ಹಾಗೂ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಎಂಬ ಷರತ್ತುಗಳನ್ನು ವಿಧಿಸಿದೆ.

ಪ್ರಕರಣದ ಮೊದಲನೇ ಆರೋಪಿ ನಲಪಾಡ್, ಇತ್ತೀಚೆಗೆ ಹೈಕೋರ್ಟ್‌ನಲ್ಲಿ ಜಾಮೀನು ಪಡೆದಿದ್ದ. ಮೊದಲನೇ ಆರೋಪಿಗೆ ಜಾಮೀನು ಸಿಕ್ಕಿರುವ ಆಧಾರದ ಮೇಲೆ ಉಳಿದ ಆರೋಪಿಗಳು ಅಧೀನ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು.

ಎಫ್‌ಐಆರ್ ದಾಖಲಾದಾಗಿನಿಂದ ತಲೆಮರೆಸಿಕೊಂಡಿರುವ ಪ್ರಕರಣದ ಮತ್ತೊಬ್ಬ ಆರೋಪಿ ಶ್ರೀಕೃಷ್ಣ ಸಹ, ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.