ಬೆಂಗಳೂರು: ಭದ್ರತಾ ಕಾಯ್ದೆಯ ವೈಯಕ್ತಿಕ ಮುಚ್ಚಳಿಕೆ ಹಾಗೂ ಜಾಮೀನು ನಿಯಮ ಉಲ್ಲಂಘಿಸಿದ ಶಿವಾಜಿನಗರದ ರೌಡಿ ಶಬ್ಬೀರ್‌ನನ್ನು (26) ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
‘ಶಿವಾಜಿನಗರ ವ್ಯಾಪ್ತಿಯ ಬ್ರಾಡ್ ವೇ ರಸ್ತೆಯ ದರ್ಗಾ ಬಳಿ ಮಾರಕಾಸ್ತ್ರಗಳೊಂದಿಗೆ ದರೋಡೆಗೆ ಸಜ್ಜಾಗಿದ್ದ ಆರೋಪದಡಿಶಬ್ಬೀರ್‌ನನ್ನು ಕಳೆದ ವರ್ಷ ಬಂಧಿಸಲಾಗಿತ್ತು. ಬಳಿಕಜಾಮೀನಿನ ಮೇಲೆ ಶಬ್ಬೀರ್ ಹೊರ ಬಂದಿದ್ದ’ ಎಂದು ಪೊಲೀಸರು ತಿಳಿಸಿದರು.
‘ಶಬ್ಬೀರ್‌ಗೆ ಒಂದು ವರ್ಷದ ಅವಧಿಗೆ ವೈಯಕ್ತಿಕ ಮುಚ್ಚಳಿಕೆ ಜಾರಿಯಲ್ಲಿತ್ತು. ಈ ಅವಧಿಯಲ್ಲಿ ಯಾವುದೇ ಅಪರಾಧ ಕೃತ್ಯಗಳಲ್ಲಿ ತೊಡಗಬಾರದು ಎಂದು ಸೂಚಿಸಲಾಗಿತ್ತು. ಆದರೂಶಬ್ಬೀರ್ ಅಪರಾಧ ಕೃತ್ಯಗಳನ್ನು ಮುಂದುವರಿಸಿದ್ದ’ ಎಂದೂ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.