ಭಾನುವಾರ, ಆಗಸ್ಟ್ 1, 2021
21 °C

ಕಾರ್ಪೊರೇಟರ್ ಇಮ್ರಾನ್ ಪಾಷಾಗೆ ಜಾಮೀನು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ವೈರಾಣು ಹರಡುವಿಕೆ ತಡೆಗೆ ಸರ್ಕಾರ ರೂಪಿಸಿರುವ ನಿಯಮ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ ಉಲ್ಲಂಘಿಸಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಪಾದರಾಯನಪುರ ವಾರ್ಡ್‌ನ ಕಾರ್ಪೊರೇಟರ್ ಇಮ್ರಾನ್ ಪಾಷಾ ಅವರಿಗೆ 37ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಕೊರೊನಾ ಸೋಂಕು ತಗುಲಿ ಚಿಕಿತ್ಸೆ ಪಡೆದು ಜೂನ್ 7ರಂದು ಮನೆಗೆ ಹೋಗುವ ವೇಳೆ ಇಮ್ರಾನ್ ಹಾಗೂ ಬೆಂಬಲಿಗರು ರಸ್ತೆಯುದ್ದಕ್ಕೂ ಮೆರವಣಿಗೆ ಮಾಡಿದ್ದರು. ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದರು. ಅಂದಿನಿಂದ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದರು.

ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಇಮ್ರಾನ್ ಪಾಷಾ, ಸಹೋದರರು ಸೇರಿದಂತೆ 22 ಆರೋಪಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಾಲಯ, ‘ತಲಾ ₹1 ಲಕ್ಷ ಮೊತ್ತದ ಬಾಂಡ್ ನೀಡಬೇಕು. ಇಬ್ಬರ ಶ್ಯೂರಿಟಿ ಒದಗಿಸಬೇಕು. ಅನುಮತಿ ಇಲ್ಲದೆ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ಹೋಗುವಂತಿಲ್ಲ. ಸಾಕ್ಷ್ಯ ನಾಶಪಡಿಸುವಂತಿಲ್ಲ’ ಎಂಬ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು