ಬೆಂಗಳೂರು: ತುಂಗಾನಗರ ಮುಖ್ಯರಸ್ತೆಯಲ್ಲಿರುವ ‘ಶ್ರೀ ಮಂಜುನಾಥ್ ಕೇಕ್ ಕಾರ್ನರ್ಸ್ ಸ್ವೀಟ್ಸ್’ ಬೇಕರಿಗೆ ನುಗ್ಗಿ ಗಲಾಟೆ ಮಾಡಿದ್ದ ದುಷ್ಕರ್ಮಿಗಳು, ಮಾಲೀಕರಿಗೆ ಜೀವ ಬೆದರಿಕೆಯೊಡ್ಡಿ ಪರಾರಿಯಾಗಿದ್ದಾರೆ.
‘ಆಗಸ್ಟ್ 16ರಂದು ನಡೆದಿರುವ ಘಟನೆ ಸಂಬಂಧ ಬೇಕರಿ ಮಾಲೀಕ ಚಂದ್ರಶೇಖರ್ ದೂರು ನೀಡಿದ್ದಾರೆ. ನಾಲ್ವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಎರಡು ಬೈಕ್‌ಗಳಲ್ಲಿ ಸ್ಥಳಕ್ಕೆ ಬಂದಿದ್ದ ದುಷ್ಕರ್ಮಿಗಳು, ದೂರುದಾರರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯೊಡ್ಡಿದ್ದರು. ಬೇಕರಿ ವಸ್ತುಗಳನ್ನು ಚಿಲ್ಲಾಪಿಲ್ಲಿ ಮಾಡಿದ್ದರು. ಕಬ್ಬಿಣದ ರಾಡ್‌ನಿಂದ ಬೇಕರಿ ಗಾಜಿನ ವಸ್ತುಗಳನ್ನು ಒಡೆದು ಸ್ಥಳದಿಂದ ಪರಾರಿಯಾಗಿದ್ದಾರೆ. ದುಷ್ಕರ್ಮಿಗಳ ಕೃತ್ಯದಿಂದ ₹35 ಸಾವಿರ ನಷ್ಟವಾಗಿರುವುದಾಗಿ ಮಾಲೀಕರು ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.