ಬುಧವಾರ, ಆಗಸ್ಟ್ 21, 2019
22 °C

ಬಕ್ರೀದ್‌: ಪ್ರಾಣಿ ಬಲಿ ಮಾಡದಂತೆ ಮನವಿ

Published:
Updated:

ಬೆಂಗಳೂರು: ‘ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದವರು ಗೋಹತ್ಯೆ-ಪ್ರಾಣಿ ಬಲಿಯನ್ನು ಮಾಡಬಾರದು. ಕಾನೂನು ಬಾಹಿರವಾಗಿ ನಡೆಯುತ್ತಿರುವ ಲಕ್ಷಾಂತರ ಗೋವುಗಳ ಹತ್ಯೆ ತಡೆಯಲು ಸರ್ಕಾರ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಬೇಕು’ ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ ದಯಾನಂದ ಸ್ವಾಮೀಜಿ ಮನವಿ ಮಾಡಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘1964ರ ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ರಕ್ಷಣೆ ಕಾಯ್ದೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆಯು ಸಂಪೂರ್ಣವಾಗಿ ನಿಷೇಧಿಸಲ್ಪಟ್ಟಿದೆ. ಗೋವು, ಕರು, ಎತ್ತು, ಒಂಟೆ ಸೇರಿದಂತೆ ವಿವಿಧ ಪ್ರಾಣಿಗಳ ಬಲಿಯನ್ನು ತಡೆಗಟ್ಟುವಂತೆ ಸುಪ್ರೀಂಕೋರ್ಟ್‌ ಹಾಗೂ ಹೈಕೋರ್ಟ್ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಸರ್ಕಾರ, ರಾಜ್ಯಪಾಲರು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು. 

Post Comments (+)