ಬೆಂಗಳೂರು: ಬಾಲಗಂಗಾಧರನಾಥ ಮೇಲ್ಸೇತುವೆ ರಸ್ತೆಯ ಒಂದು ಪಾರ್ಶ್ವದಲ್ಲಿ ಶುಕ್ರವಾರ ಸಂಜೆಯಿಂದ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲು ಪಾಲಿಕೆ ಮುಂದಾಗಿದೆ.

‘ಮೇಲ್ಸೇತುವೆಯಲ್ಲಿ ಒಂದು ಪಾರ್ಶ್ವದ ರಸ್ತೆಯ ಡಾಂಬರೀಕರಣ ಕಾಮಗಾರಿ ಪೂರ್ಣಗೊಂಡಿದೆ. ಪುರಭವನ ಕಡೆಯಿಂದ ಮೈಸೂರು ರಸ್ತೆ ಕಡೆಗೆ ಚಲಿಸುವ ವಾಹನಗಳು ಈ ಮೇಲ್ಸೇತುವೆ ಮೇಲೆ ಸಂಚರಿಸುವುದಕ್ಕೆ ಶುಕ್ರವಾರ ಸಂಜೆ ಬಳಿಕ ಅವಕಾಶ ಮಾಡಿಕೊಡುತ್ತೇವೆ’ ಎಂದು ಪಾಲಿಕೆ ಮುಖ್ಯ ಎಂಜಿನಿಯರ್ (ಯೋಜನೆ) ಕೆ.ಟಿ.ನಾಗರಾಜ್ ತಿಳಿಸಿದ್ದಾರೆ.

2018ರ ಡಿಸೆಂಬರ್ ಅಂತ್ಯದಲ್ಲಿ ಈ ಮೇಲ್ಸೇತುವೆಯ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಆರಂಭಿಸಲಾಗಿತ್ತು. ಕಾಮಗಾರಿಯ ಸಂದರ್ಭದಲ್ಲಿ ಪುರಭವನದಿಂದ ಮೈಸೂರು ರಸ್ತೆ ಕಡೆಗೆ ಸಂಚರಿಸುವ ವಾಹನಗಳು ಕೆ.ಆರ್. ಮಾರುಕಟ್ಟೆ ರಸ್ತೆ ಮೂಲಕ ಸಾಗುತ್ತಿದ್ದವು.

ಮೈಸೂರು ರಸ್ತೆ ಕಡೆಯಿಂದ ಪುರಭವನದ ಕಡೆಗಿನ ರಸ್ತೆಯ ಡಾಂಬರೀಕರಣ ನಡೆಯುವುದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗುತ್ತಿದೆ. ಈ ಕಾಮಗಾರಿಯನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.