ಬೊಮ್ಮನಹಳ್ಳಿ: ಬೆಂಗಳೂರು ಸಹಕಾರ ಹಾಲು ಒಕ್ಕೂಟದ (ಬಮೂಲ್) ಅಧ್ಯಕ್ಷರಾಗಿ ಕನಕಪುರದ ಎಚ್.ಪಿ.ರಾಜಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಮೂಲ್‌ನ 20ನೇ ಅಧ್ಯಕ್ಷರಾಗಿ ಆಯ್ಕೆಯಾದ ರಾಜಕುಮಾರ್, ಕಳೆದ ಒಂಬತ್ತು ವರ್ಷಗಳಿಂದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
‘ಸ್ವತಃ ರೈತನಾಗಿರುವ ನಾನು, ರೈತರಿಗೆ ಬೆಂಬಲ ಬೆಲೆ ದೊರೆಯುವಂತೆ ಮಾಡುವುದು ನನ್ನ ಪ್ರಥಮ ಆದ್ಯತೆ. ಅದೇ ರೀತಿ ಸಂಸ್ಥೆಯ ಮಾರುಕಟ್ಟೆ ಮೌಲ್ಯ ವೃದ್ಧಿಸುವಂತೆ ಮಾಡುವುದು, ಪೈಪೋಟಿಯ ಮಾರುಕಟ್ಟೆ ವ್ಯವಸ್ಥೆಯಲ್ಲಿ ಸರಕಿನ ಗುಣಮಟ್ಟ ಕಾಯ್ದುಕೊಳ್ಳುವ ಸವಾಲು ನಮ್ಮ ಮುಂದಿದೆ. ಇದಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ’ ರಾಜಕುಮಾರ್ ಸುದ್ದಿಗೋಷ್ಠಿ ಹೇಳಿದರು.
ಇದುವರೆಗೆ ನರಸಿಂಹಮೂರ್ತಿ ಅವರು ಅಧ್ಯಕ್ಷರಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.