ರಾಜರಾಜೇಶ್ವರಿನಗರ: ‘ಬೆಂಗಳೂರು ಹಾಲು ಒಕ್ಕೂಟವು (ಬಮೂಲ್) ಲಾಭದಲ್ಲಿ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದ್ದು, ಮುಂದಿನ ನಾಲ್ಕು ವರ್ಷದಲ್ಲಿ ರಾಷ್ಟ್ರದಲ್ಲಿಯೇ ಅಗ್ರಸ್ಥಾನಕ್ಕೆ ಏರಲಿದೆ’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ಹೇಳಿದರು.

ಸಂಘಗಳ ಸದಸ್ಯರು, ಸಿಬ್ಬಂದಿಗೆ ವಿಶೇಷ ಪ್ರೋತ್ಸಾಹಧನದ ಚೆಕ್ ಮತ್ತು ₹40 ಕೋಟಿ ಲಾಭವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡುವ ಕಾರ್ಯಕ್ರಮದಲ್ಲಿ ಅವರು ಬುಧವಾರ ಮಾತನಾಡಿದರು.

‘ನಾನು ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡಾಗ ನಷ್ಟದಲ್ಲಿದ್ದ ಸಂಸ್ಥೆ, ಈಗ ಲಾಭದಲ್ಲಿದೆ. ಮುಂದೆ ವಿದೇಶಿಯರೂ ನಂದಿನಿ ಉತ್ಪನ್ನಗಳನ್ನೇ ಖರೀದಿಸುವ ವಾತಾವರಣ ನಿರ್ಮಾಣಕ್ಕೆ ರೈತರು, ಸಿಬ್ಬಂದಿ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.

ವಿಧಾನ ಪರಿಷತ್ ಸದಸ್ಯ ಎಸ್.ರವಿ ಮಾತನಾಡಿ, ‘ಹೈನುಗಾರಿಕೆಗೆ ಹಸು ಕೊಂಡುಕೊಳ್ಳಲು ಬಿಡಿಸಿಸಿ ಬ್ಯಾಂಕ್ ವತಿಯಿಂದ ತಲಾ ₹10 ಲಕ್ಷದಿಂದ ₹15 ಲಕ್ಷದವರೆಗೆ ಸಾಲ ನೀಡಲಾಗುತ್ತಿದೆ’ ಎಂದರು.

ಕೆಎಂಎಫ್ ಮಾಜಿ ಅಧ್ಯಕ್ಷ ಪಿ.ನಾಗರಾಜು, ಬಮೂಲ್ ನಿರ್ದೇಶಕರಾದ ಆರ್.ಕೆ.ರಮೇಶ್, ಬಿ.ಸಿ.ಆನಂದ ಕುಮಾರ್, ಉಪಾಧ್ಯಕ್ಷ ರಾಜಣ್ಣ, ಎಚ್.ಎಸ್. ಹರೀಶ್ ಕುಮಾರ್, ಕಡತನಮಲೆ ಸತೀಶ್, ಬಿಎಂಐಸಿಪಿ ಅಧ್ಯಕ್ಷ ರಘುನಂದನ್ ರಾಮಣ್ಣ, ಮಾಜಿ ಶಾಸಕ ಕೆ.ರಾಜು, ಬಮೂಲ್ ವ್ಯವಸ್ಥಾಪಕ ನಿರ್ದೇಶಕ ಎಸ್.ಟಿ.ಸುರೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.