ಬೆಂಗಳೂರು: ನೋಂದಣಿಯೇ ಇಲ್ಲದ ಆರ್ಎಸ್ಎಸ್ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಪಥಸಂಚಲನ ಮಾಡಲು ಹೊರಟಿರುವುದು ಕಾನೂನು ಬಾಹಿರ. ಆರ್ಎಸ್ಎಸ್ ಅನ್ನು ನಿಷೇಧಿಸಬೇಕು ಎಂದು ಕೆಪಿಸಿಸಿ ಸದಸ್ಯ ವಿನಯ್ ಗಾಂಧಿ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರ್ಎಸ್ಎಸ್ ಪಥಸಂಚಲನ ಮಾಡುವ ದಿನವೇ ಭೀಮ ಸೇನಾ ಸಂಘಟನೆ, ರೈತ ಸಂಘ, ದಲಿತ ಸಂಘ, ಕ್ರಿಶ್ಚಿಯನ್ ಸಮಾಜ ಸೇರಿದಂತೆ 11 ಸಂಘಟನೆಗಳು ಪಥಸಂಚಲನ ಮಾಡಲು ಅನುಮತಿ ಕೇಳಿವೆ. ಇದರಿಂದ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇದ್ದು, ಆರ್ಎಸ್ಎಸ್ ಅದಕ್ಕೆ ನೇರಹೊಣೆಯಾಗಲಿದೆ’ ಎಂದು ಹೇಳಿದರು.

ಸಮುದಾಯವನ್ನು ಒಡೆಯುವ ಕೆಲಸ ಮಾಡುವ ಸಂಘ ಪರಿವಾರದವರು ಬ್ರಿಟಿಷರ ಗುಲಾಮರಾಗಿದ್ದರು. ಆರ್ಎಸ್ಎಸ್ ಸೇರಿದಂತೆ ಭಯೋತ್ಪಾದಕ ಕೃತ್ಯದಲ್ಲಿ ತೊಡಗಿರುವ ಎಲ್ಲ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.

ಕೆಪಿಸಿಸಿ ಸದಸ್ಯ ಮಹಮ್ಮದ್ ಗೌಸ್ ಮಾತನಾಡಿ, ‘ರಾಜ್ಯದಲ್ಲಿ ವಿಧಾನ ಪರಿಷತ್ತಿಗೆ ಶಿಕ್ಷಕರ ಮತ್ತು ಪದವೀಧರರ 16 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಒಂದು ಕ್ಷೇತ್ರದಲ್ಲಿಯಾದರೂ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಅವಕಾಶ ನೀಡಬೇಕು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.