ಬೆಂಗಳೂರು: ‘ಜಾನಪದ ಕಲಾವಿದರಾದ ಬಾನಂದೂರು ಕೆಂಪಯ್ಯ ಅವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಬೇಕು’ ಎಂದು ಸಮತಾ ಸೈನಿಕ ದಳದ ರಾಜ್ಯ ಘಟಕದ ಅಧ್ಯಕ್ಷ ಎಂ. ವೆಂಕಟಸ್ವಾಮಿ ಹೇಳಿದರು.

ಕರ್ನಾಟಕ ರಾಜ್ಯ ಸಂವಿಧಾನ ಬಳಗ ಶನಿವಾರ ಆಯೋಜಿಸಿದ್ದ ‘ದಣಿವರಿಯದ ಗಾನಕೋಗಿಲೆ ಬಾನಂದೂರು ಕೆಂಪಯ್ಯ ಅವರಿಗೆ 75ರ ಸಂಭ್ರಮ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ನಾಲ್ಕು ದಶಕಗಳಿಂದ ಬಾನಂದೂರು ಕೆಂಪಯ್ಯ ಜಾನಪದ ಗೀತೆಗಳನ್ನು ಹಾಡುವ ಮೂಲಕ ಮನೆ ಮಾತಾಗಿದ್ದಾರೆ. ಅವರಿಗೆ ದೇಶದ ಉನ್ನತ ಪ್ರಶಸ್ತಿ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಬೇಕು. ಈ ಬಗ್ಗೆ ಕೇಂದ್ರ ಸಚಿವ ರಾಮದಾಸ್ ಅಠವಳೆ ಅವರ ಮೂಲಕ ಮನವಿ ಸಲ್ಲಿಸಲಾಗುವುದು. ಮುಂದಿನ ಅವರ ಜನ್ಮದಿನಕ್ಕೆ ಪದ್ಮಶ್ರೀ ಪ್ರಶಸ್ತಿ ಸಿಗುವಂತಾಗಬೇಕು’ ಎಂದು ಆಶಿಸಿದರು.

‘ಕೆಂಪಯ್ಯ ಅವರಿಗೆ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡುವಂತೆ ದಲಿತ ಸಂಘಟನೆಗಳ ಮುಖಂಡರು, ಸಾಹಿತಿಗಳು, ಕಲಾವಿದರು, ಚಿಂತಕರು, ಸಂಘ–ಸಂಸ್ಥೆಗಳು, ನಮ್ಮ ಸಮುದಾಯದ ಸಚಿವರು ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಬೇಕು’ ಎಂದರು.

ಇದೇ ಸಂದರ್ಭದಲ್ಲಿ ಕೆಂಪಯ್ಯ ಅವರಿಗೆ ಬೆಳ್ಳಿ ಕಿರೀಟ ತೊಡಿಸಿ ಗೌರವಿಸಲಾಯಿತು. ಕೆಂಪಯ್ಯ ಅವರ ಪತ್ನಿ ಸುಚಿತ್ರಾ ಉಪಸ್ಥಿತರಿದ್ದರು. ಹಲವಾರು ಜಾನಪದ ಕಲಾವಿದರು ಕೆಂಪಯ್ಯ ಅವರಿಗೆ ತಮ್ಮ ಹಾಡುಗಳ ಮೂಲಕ ಗೌರವ ಸಲ್ಲಿಸಿದರು.

ಕರ್ನಾಟಕ ಸಂವಿಧಾನ ಬಳಗದ ರಾಜ್ಯ ಘಟಕದ ಅಧ್ಯಕ್ಷ ಎಸ್. ಜಯಕಾಂತ್ ಚಾಲುಕ್ಯ, ಮಾಜಿ ಶಾಸಕ ಎ.ಕೆ. ಅನ್ನದಾನಿ, ಮಾಜಿ ವಿಧಾನ ಪರಿಷತ್ ಸದಸ್ಯ ಡಿ.ಎಸ್. ವೀರಯ್ಯ, ಪತ್ರಕರ್ತ ಇಂದೂಧರ ಹೊನ್ನಾಪುರ, ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಚಲನಚಿತ್ರ ನಟ ಮದನ್ ಪಟೇಲ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.