ಸೋಮವಾರ, ಸೆಪ್ಟೆಂಬರ್ 20, 2021
26 °C

ಅತ್ಯಾಚಾರ ಪ್ರಕರಣ: ನೈಜೀರಿಯಾದ ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಾಫ್ಟ್‌ವೇರ್‌ ಕಂಪನಿಯೊಂದರ ಮಹಿಳಾ ಎಂಜಿನಿಯರೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ನೈಜೀರಿಯಾದ ಇಬ್ಬರು ಪ್ರಜೆಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ.

'ಟೋನಿ ಹಾಗೂ ಅಬುಜಿ ಉಬಾಕಾ ಬಂಧಿತರು. ಮಹಿಳಾ ಟೆಕಿಯೊಬ್ಬರು ನೀಡಿದ್ದ ದೂರು ಆಧರಿಸಿ ಅವರಿಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳು ಹೊರದೇಶದ ಪ್ರಜೆಗಳಾಗಿದ್ದರಿಂದ, ಅವರ ಬಂಧನದ ಬಗ್ಗೆ ಶಾಂತಿನಗರದಲ್ಲಿರುವ ಪ್ರಾದೇಶಿಕ ವಿದೇಶಿ ನೋಂದಣಿ ಕೇಂದ್ರದ (ಎಫ್‌ಆರ್‌ಆರ್‌ಒ) ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಆಂಧ್ರಪ್ರದೇಶದ ಮಹಿಳೆ, ನಗರದ ಕಂಪನಿಯೊಂದರಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಅವರ ಜೊತೆ ಆರೋಪಿ ಟೋನಿ ಸ್ನೇಹ ಬೆಳೆಸಿದ್ದ. ಸ್ನೇಹವನ್ನೇ ದುರುಪಯೋಗಪಡಿಸಿಕೊಂಡ ಟೋನಿ, ಇನ್ನೊಬ್ಬ ಆರೋಪಿ ಅಬುಜಿ ಉಬಾಕಾ ಜೊತೆ ಸೇರಿ ಮಹಿಳೆ ಮೇಲೆ ಇತ್ತೀಚೆಗೆ ಅತ್ಯಾಚಾರ ಎಸಗಿದ್ದ. ನೊಂದ ಮಹಿಳೆ, ಠಾಣೆಗೆ ದೂರು ನೀಡಿದ್ದರು.’

‘ದೂರು ದಾಖಲಾದ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು