ಬೆಂಗಳೂರು: ಬನಶಂಕರಿ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದ್ದ ಕಾರು–ಬೈಕ್ ನಡುವಿನ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಪಾನಮತ್ತನಾಗಿ ಕಾರು ಚಲಾಯಿಸಿದ್ದ ವ್ಯಕ್ತಿ ಪದ್ಮನಾಭನಗರ ನಿವಾಸಿ ಸುಹಾಸ್ ವೆಂಕಟೇಶ್ (26) ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ.

‘ಸುಹಾಸ್ ಡಿಜೆ ಎಂದು ತಿಳಿದುಬಂದಿದೆ. ಬೈಕ್ ಸವಾರರಾದ ಬನಶಂಕರಿಯ ಕಾವೇರಿ ನಗರದಲ್ಲಿ ವಾಸವಿದ್ದ ರಾಜಸ್ಥಾನದ ಕೇತಾರಾಂ (40) ಹಾಗೂ ಕೀಮಾರಂ (20) ಮೃತಪಟ್ಟಿದ್ದರು’.

‘ಪಾರ್ಟಿಯಿಂದ ತನ್ನ ಸ್ನೇಹಿತೆ ಜೊತೆ ಮರಳುವಾಗ ಪಾನಮತ್ತನಾಗಿದ್ದ ಸುಹಾಸ್, ವೇಗವಾಗಿ ಕಾರು ಚಲಾಯಿಸಿ ಇಬ್ಬರ ಸಾವಿಗೆ ಕಾರಣವಾಗಿದ್ದಾನೆ. ಘಟನೆಯಲ್ಲಿ ಗಾಯಗೊಂಡಿರುವ ಸುಹಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರಕ್ತದ ಮಾದರಿ ಪರೀಕ್ಷಿಸಿದಾಗ ಮದ್ಯದ ಅಮಲಿನಲ್ಲಿರುವುದು ದೃಢಪಟ್ಟಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಚೇತರಿಸಿಕೊಂಡ ನಂತರಸುಹಾಸ್ನನ್ನು ಬಂಧಿಸಲಾಗುವುದು’ ಎಂದೂ ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.