ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಈಗಾಗಲೇ ಮೇಲ್ಮನವಿ ಸಲ್ಲಿಸಲಾಗಿದೆ.
ಎನ್.ಜಯರಾಮ್ ಬಿಡಿಎ ಆಯುಕ್ತ
24 ವರ್ಷದ ಹಿಂದೆ ಅಧಿಸೂಚನೆ
ಬನಶಂಕರಿ 6ನೇ ಹಂತದ ಬಡಾವಣೆ ಅಭಿವೃದ್ಧಿಗಾಗಿ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿ 24 ವರ್ಷ ಕಳೆದರೂ ಜಮೀನು ಸ್ವಾಧೀನಪಡಿಸಿಕೊಂಡಿಲ್ಲ.
ಬಹುತೇಕ ಜಮೀನುಗಳನ್ನು ಸ್ವಾಧೀನದಿಂದ ಕೈಬಿಟ್ಟು ಹಲವು ಜಮೀನುಗಳಿಗೆ ಸಂಬಂಧಿಸಿದಂತೆ ಮಾತ್ರವೇ ಪ್ರಕ್ರಿಯೆ ಮುಂದುವರಿಸಿರುವುದು ಕಾನೂನುಬಾಹಿರ ಮತ್ತು ತಾರತಮ್ಯದ ಕ್ರಮವಾಗಿದೆ. ಹಾಗಾಗಿ ಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಬೇಕು ಎಂದು ಕೋರಿ ಎಚ್. ನಾಗರಾಜಯ್ಯ ಹಾಗೂ ಮತ್ತಿತರರು ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಬಡಾವಣೆ ಅಭಿವೃದ್ಧಿ ಯೋಜನೆಯನ್ನು ಬಹುತೇಕ ಅನುಷ್ಠಾನಗೊಳಿಸಿರುವ ಕಾರಣ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ಅವಕಾಶ ನೀಡಬೇಕೆಂಬ ಬಿಡಿಎ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ.