ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂದ್‌ ನಷ್ಟ: ಕಮಿಷನರ್‌ ನೇಮಕ

Last Updated 18 ಜನವರಿ 2022, 16:51 IST
ಅಕ್ಷರ ಗಾತ್ರ

ಬೆಂಗಳೂರು:’ಮಹದಾಯಿ ನ್ಯಾಯಮಂಡಳಿ ತೀರ್ಪು ವಿರೋಧಿಸಿ 2018ರಲ್ಲಿ ನಡೆದ ಬಂದ್‌ ಹಾಗೂ ಜಾರಿ ನಿರ್ದೇಶನಾಲಯದಿಂದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನವಾಗಿದ್ದ ವೇಳೆ ಅದನ್ನು ಖಂಡಿಸಿ 2019ರಲ್ಲಿ ನಡೆದ ಪ್ರತ್ಯೇಕ ಬಂದ್‌ಗಳ ಸಂದರ್ಭದಲ್ಲಿ ಉಂಟಾದ ಆಸ್ತಿಪಾಸ್ತಿ ನಷ್ಟದ ಅಂದಾಜು ಮಾಡಲು ಕ್ಲೇಮ್‌ ಕಮಿಷನರ್‌ಗಳನ್ನು ನೇಮಕ ಮಾಡಲಾಗಿದೆ‘ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

'ಡಿ.ಕೆ. ಶಿವಕುಮಾರ್ ಬಂಧನ ವಿರೋಧಿಸಿ ನಡೆದ ಬಂದ್ ಮತ್ತು ಪ್ರತಿಭಟನೆಯಿಂದ ಉಂಟಾದ ನಷ್ಟವನ್ನು ಅಂದಾಜಿಸಲು ನೇಮಿಸಿರುವ ಕ್ಲೇಮ್ ಕಮಿಷನರ್ ರಾಮನಗರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಕಚೇರಿ ಹಾಗೂ ಮೂಲಸೌಕರ್ಯ ಒದಗಿಸಲಾಗಿದೆ. ಮತ್ತೊಂದು ಬಂದ್‌ಗೆ ಸಂಬಂಧಿಸಿದಂತೆಯೂ ಕ್ಲೇಮ್ ಕಮಿಷನರ್ ನೇಮಕ ಮಾಡಲಾಗಿದೆ. ಇವರೆಡರ ಪ್ರಗತಿ ವರದಿ ಸಲ್ಲಿಸಲು ಕಾಲಾವಕಾಶ ಬೇಕು'ಎಂದು ಸರ್ಕಾರಿ ವಕೀಲರು ಕೋರಿದರು.ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ’ಈ ಬಗ್ಗೆ ವರದಿ ಸಲ್ಲಿಸಿ'ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT