ಸೋಮವಾರ, ನವೆಂಬರ್ 30, 2020
21 °C

ಬೆಂಗಳೂರು: ಪತ್ನಿಗೆ ಗುಂಡಿಕ್ಕಿ ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ಪತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಸವೇಶ್ವರನಗರ ಠಾಣೆ ವ್ಯಾಪ್ತಿಯಲ್ಲಿ ಸುಮಿತ್ರಾ ಎಂಬುವರನ್ನು ಸೋಮವಾರ ಬೆಳಿಗ್ಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಆರೋಪಿ ಕಾಳಪ್ಪ, ಕೃತ್ಯದ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಸುಮಿತ್ರಾ ಹಾಗೂ ಕಾಳಪ್ಪ ಕೆಲ ವರ್ಷಗಳ ಹಿಂದೆ ಮದುವೆ ಆಗಿದ್ದರು. ಇತ್ತೀಚೆಗೆ ಅವರ ನಡುವೆ ಜಗಳ ಆಗುತ್ತಿತ್ತು. ಹಬ್ಬದ ದಿನವಾದ ಸೋಮವಾರ ಬೆಳಿಗ್ಗೆ ಪುನಃ ಜಗಳ ನಡೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು.

ಅದೇ ವೇಳೆಯೇ ಆರೋಪಿ, ತನ್ನ ಬಳಿಯ ಪಿಸ್ತೂಲ್‌ನಿಂದ ಪತ್ನಿ ಸುಮಿತ್ರಾ ಮೇಲೆ ಗುಂಡು ಹಾರಿಸಿದ್ದಾನೆ. ಸುಮಿತ್ರಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.

ಪತ್ನಿ ಹತ್ಯೆ ನಂತರ ಆರೋಪಿ, ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.

'ಸುಮಿತ್ರಾ ಹತ್ಯೆ ಸಂಬಂಧ ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಕಾಳಪ್ಪ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ನಂತರ ಹರೆಳಿಕರ ಪಡೆಯಲಾಗುವುದು' ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದರು‌.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು