ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಅಪಘಾತ: ರಸ್ತೆ ದಾಟುತ್ತಿದ್ದ ಪಾದಚಾರಿ ಸಾವು

Published 20 ಆಗಸ್ಟ್ 2023, 16:31 IST
Last Updated 20 ಆಗಸ್ಟ್ 2023, 16:31 IST
ಅಕ್ಷರ ಗಾತ್ರ

ಬೆಂಗಳೂರು: ಬ್ಯಾಟರಾಯನಪುರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡಿದ್ದ ಮದಿ ಅಳಗನ್ (50) ಅವರು ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟಿದ್ದಾರೆ.

‘ಸ್ಥಳೀಯ ನಿವಾಸಿ ಮದಿ ಅಳಗನ್ ಅವರು ನಾಯಂಡನಹಳ್ಳಿ ಜಂಕ್ಷನ್ ಬಳಿ ಆಗಸ್ಟ್ 19ರಂದು ರಾತ್ರಿ ರಸ್ತೆ ದಾಟುತ್ತಿದ್ದರು. ಅದೇ ಸಂದರ್ಭದಲ್ಲಿ ಅತೀ ವೇಗವಾಗಿ ಬಂದಿದ್ದ ವಾಹನವೊಂದು ಅವರಿಗೆ ಡಿಕ್ಕಿ ಹೊಡೆದಿತ್ತು’ ಎಂದು ಪೊಲೀಸರು ಹೇಳಿದರು.

‘ಗಾಯಗೊಂಡಿದ್ದ ಅಳಗನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೇ ಅವರು ಮೃತಪಟ್ಟಿದ್ದಾರೆ. ಅಪಘಾತದ ನಂತರ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT