ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ: ‘ದೇಸಿ’ ಸಮ್ಮೇಳನ ಇದೇ 18ಕ್ಕೆ

Published 14 ಅಕ್ಟೋಬರ್ 2023, 14:23 IST
Last Updated 14 ಅಕ್ಟೋಬರ್ 2023, 14:23 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಇದೇ 18ರಂದು ಪ್ರಥಮ ‘ದೇಸಿ ಸಮ್ಮೇಳನ’ವನ್ನು ಜಿಕೆವಿಕೆಯ ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಭಾಂಗಣದಲ್ಲಿ ನಡೆಯಲಿದೆ.

ಈ ಸಮ್ಮೇಳನವು ಸೆ. 29ರಂದು ನಡೆಯಬೇಕಿತ್ತು. ಆದರೆ, ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.

‘ಈ ಸಮ್ಮೇಳನದಲ್ಲಿ ದಕ್ಷಿಣ ಕರ್ನಾಟಕ 16 ಜಿಲ್ಲೆಗಳಾದ ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ತುಮಕೂರು, ಉಡುಪಿ ಮತ್ತು ರಾಮನಗರದ ಕೃಷಿ ಪರಿಕರ ಮಾರಾಟಗಾರರು ಭಾಗವಹಿಸಲಿದ್ದಾರೆ’ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ವಿ.ಎಲ್. ಮಧುಪ್ರಸಾದ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನ ಉದ್ಘಾಟಿಸಲಿದ್ದು, ಅತಿಥಿಗಳಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೃಷಿ ಸಚಿವ ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣಬೈರೇಗೌಡ ಭಾಗವಹಿಸಲಿದ್ದಾರೆ ಎಂದಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT