ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ವಿ.ವಿ.: ಪ್ರಶಸ್ತಿಗೆ ಅರ್ಜಿ ಆಹ್ವಾನ

Last Updated 7 ಜುಲೈ 2022, 4:13 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ರೈತರು, ರೈತ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.

‍ಪ್ರಶಸ್ತಿಗಳ ವಿವರ ಇಂತಿದೆ: ರಾಜ್ಯ ಮಟ್ಟದ ಪ್ರಶಸ್ತಿಗಳು:ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ ಅಥವಾ ರೈತ ಮಹಿಳೆ ಪ್ರಶಸ್ತಿ,ಡಾ. ಎಂ.ಎಚ್. ಮರಿಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಅಥವಾ ರೈತ ಮಹಿಳೆ ಪ್ರಶಸ್ತಿ,ಕೆನರಾ ಬ್ಯಾಂಕ್ ಪ್ರಯೋಜಿತ ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ,ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ, ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ ಅಥವಾ ರೈತಮಹಿಳೆ ಪ್ರಶಸ್ತಿ.

ಜಿಲ್ಲಾ ಮಟ್ಟದ ಪ್ರಶಸ್ತಿಗಳು: ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ, ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಮಹಿಳೆ ಪ್ರಶಸ್ತಿ.

ತಾಲ್ಲೂಕು ಮಟ್ಟದ ಪ್ರಶಸ್ತಿಗಳು: ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಪ್ರಶಸ್ತಿ, ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಮಹಿಳೆ ಪ್ರಶಸ್ತಿ.

ನಿಗದಿತ ಅರ್ಜಿ ನಮೂನೆಯು ಜಂಟಿ ಕೃಷಿ ನಿರ್ದೇಶಕರ ಕಚೇರಿ, ವಿಸ್ತರಣಾ ನಿರ್ದೇಶಕರ ಕಚೇರಿ, ಜಿಕೆವಿಕೆ ಬೆಂಗಳೂರು ಮತ್ತು ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ದೊರೆಯುತ್ತದೆ. ವೆಬ್‍ಸೈಟ್‍ನಲ್ಲೂ (www.uasbangalore.edu.in) ಸಹ ಅರ್ಜಿ ನಮೂನೆ ಲಭ್ಯ.ಜುಲೈ 31ರ ಒಳಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಮಾಹಿತಿಗೆ 080-23330153, ವಿಸ್ತರಣೆ: 401.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT