ಬೆಂಗಳೂರು: ವಿದೇಶದಿಂದ ಚಿನ್ನವನ್ನು ಕಳ್ಳ ಸಾಗಣೆಯ ಮೂಲಕ ತಂದಿದ್ದ ಐವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್ಐ) ಅಧಿಕಾರಿಗಳು, ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಆರೋಪಿಗಳಿಂದ ₹5 ಕೋಟಿ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಆಧರಿಸಿ ವಿಮಾನ ನಿಲ್ದಾಣದ ಟರ್ಮಿನಲ್–2ರಲ್ಲಿ ಕಾರ್ಯಾಚರಣೆ ನಡೆಸಲಾಯಿತು ಎಂದು ಅಧಿಕಾರಿಗಳು ಹೇಳಿದರು.

ಸ್ಥಳೀಯರ ನೆರವು ಪಡೆದು ಬಾಂಗ್ಲಾದೇಶದ ಐವರು, ಚಿನ್ನವನ್ನು ಕಳ್ಳಸಾಗಣೆ ಮಾಡಲು ಮುಂದಾಗಿದ್ದರು. ಎಲ್ಲಿಂದ ಚಿನ್ನವನ್ನು ತರಲಾಗುತ್ತಿತ್ತು, ಯಾರಿಗೆ ಚಿನ್ನವನ್ನು ಮಾರಾಟ ಮಾಡಲು ಆರೋಪಿಗಳು ಮುಂದಾಗಿದ್ದರು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.