ಬೆಂಗಳೂರು: ಬೈಕ್ ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿದ್ದ ಜಾಹೀರಾತು ಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ದೇವನಹಳ್ಳಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಸಂಜೆ ನಡೆದಿದೆ.

ಸಾವಕನಹಳ್ಳಿಯ ಡೇವಿಡ್ (25) ಮೃತ ಬೈಕ್ ಸವಾರ.

ಸಾವಕನಹಳ್ಳಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಪತ್ನಿಯ ಜತೆಗೆ ಡೇವಿಡ್ ವಾಸವಿದ್ದರು. ಗುರುವಾರ ಸಂಜೆ 4.30ರ ಸುಮಾರಿಗೆ ಮನೆ ಮಾಲೀಕರ ಪುತ್ರ ಚರಣ್ ಅವರನ್ನು ಬೈಕ್ನಲ್ಲಿ ಕರೆದುಕೊಂಡು ಹೋಟೆಲ್ಗೆ ಹೋಗಿದ್ದರು. ದೇವನಹಳ್ಳಿಯಲ್ಲಿ ಇರುವ ಹೋಟೆಲ್ವೊಂದಕ್ಕೆ ಹೋಗಿ ಊಟ ಮುಗಿಸಿಕೊಂಡು ಸಾವಕನಹಳ್ಳಿ ಪಾರ್ಕ್ ಬಳಿ ಬರುವಾಗ, ಬೈಕ್ ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿದ್ದ ಜಾಹೀರಾತು ಫಲಕಕ್ಕೆ ಡಿಕ್ಕಿ ಹೊಡೆದಿತ್ತು. ಇಬ್ಬರೂ ಕೆಳಗೆ ಬಿದ್ದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಡೇವಿಡ್ ಅವರನ್ನು ಸಿ.ವಿ ರಾಮನ್ನಗರದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.

ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.