ಬೆಂಗಳೂರು: ಕಾವೇರಿ 2ನೇ ಹಂತದ 600 ಮಿ.ಮೀ. ವ್ಯಾಸದ ಮುಖ್ಯ ಕುಡಿಯುವ ನೀರಿನ ಕೊಳವೆಯಲ್ಲಿ ಉಂಟಾಗಿರುವ ಭಾರೀ ಸೋರಿಕೆ ತಡೆಗಟ್ಟಲು ಬೆಂಗಳೂರು ಜಲಮಂಡಳಿಯು ತುರ್ತು ದುರಸ್ತಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ.

ಈ ಹಿನ್ನೆಲೆಯಲ್ಲಿ ದುರಸ್ತಿ ಕಾಮಗಾರಿ ಮುಗಿಯುವವರೆಗೆ ಶುಕ್ರವಾರ ಸುಮಾರು 8 ಗಂಟೆಗಳ ಕಾಲ ಮೈಸೂರು ರಸ್ತೆ ಸೇವಾ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಸೌತ್ ಎಂಡ್ ವೃತ್ತದ ಮುಖಾಂತರ ಮೈಸೂರು ರಸ್ತೆ ಸೇವಾ ಪ್ರದೇಶಗಳಿಗೆ ಪ್ರತಿನಿತ್ಯ 14 ಎಂಎಲ್ಡಿ ನೀರು ಸರಬರಾಜು ಮಾಡುವ ಪೈಪ್ಲೈನ್ ರಸ್ತೆಯ ಹನುಮಂತನಗರ ಪೊಲೀಸ್ ಕ್ವಾರ್ಟರ್ಸ್ ಎದುರು ಮುಖ್ಯ ಕೊಳವೆಯಲ್ಲಿ ರಂಧ್ರ ಉಂಟಾಗಿ, ಹೆಚ್ಚಿನ ಒತ್ತಡದಲ್ಲಿ ನೀರು ಚಿಮ್ಮುತ್ತಿದೆ. ಇದರಿಂದ ಅಪಾರ ಪ್ರಮಾಣದ ಶುದ್ಧ ಕುಡಿಯುವ ನೀರು ಪೋಲಾಗುವುದರ ಜೊತೆಗೆ, ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳಿಗೂ ತೀವ್ರ ತೊಂದರೆಯಾಗುತ್ತಿದೆ.

ಸಾರ್ವಜನಿಕ ಹಿತದೃಷ್ಟಿ ಹಾಗೂ ಅಮೂಲ್ಯವಾದ ನೀರಿನ ಸದ್ಬಳಕೆಯ ಉದ್ದೇಶದಿಂದ ಸೌತ್ ಎಂಡ್ ರಸ್ತೆಯ ಸುರಾನ ಕಾಲೇಜು ಬಳಿ ಇರುವ 24 ಅಂಗುಲದ ಕವಾಟವನ್ನು 8 ಗಂಟೆಗಳ ಕಾಲ ಬಂದ್ ಮಾಡಿ ಸಮರೋಪಾದಿಯಲ್ಲಿ ಸೋರಿಕೆ ತಡೆಗಟ್ಟುವ ದುರಸ್ತಿ ಕಾಮಗಾರಿಯನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಕಸ್ತೂರಬಾ ನಗರ, ಬಾಪೂಜಿನಗರ, ಶಾಮಣ್ಣ ಗಾರ್ಡನ್, ಮಂಜುನಾಥನಗರ, ಹೊಸಗುಡ್ಡದಹಳ್ಳಿ, ಹಳೇಗುಡ್ಡದಹಳ್ಳಿ, ಅರಾಫತ್ ನಗರದಲ್ಲಿ ನೀರು ಸರಬರಾಜು ವ್ಯತ್ಯಯ ಆಗಲಿದೆ. ಕಾಮಗಾರಿ ಪೂರ್ಣಗೊಂಡ ತಕ್ಷಣವೇ ಈ ಎಲ್ಲಾ ಪ್ರದೇಶಗಳಿಗೆ ಎಂದಿನಂತೆ ಸುಗಮವಾಗಿ ನೀರು ಸರಬರಾಜು ಮಾಡಲಾಗುವುದು. ಸಾರ್ವಜನಿಕರು ಹಾಗೂ ಗ್ರಾಹಕರು ಮಂಡಳಿಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.