ಬೆಂಗಳೂರು: ನಗರದ ವಿವಿಧ ಭಾಗದಲ್ಲಿ ಏಪ್ರಿಲ್ 22ರ ಬುಧವಾರ ಕಾವೇರಿ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಆಗಿದೆ.

ನಗರಕ್ಕೆ ಕಾವೇರಿ ನೀರು ಪೂರೈಸುವ ತಾತಗುಣಿಯಲ್ಲಿ 220 ಕೆವಿಎ ವಿದ್ಯುತ್ ಸ್ಥಾವರದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ.

ತಕ್ಷಣದಿಂದಲೇ ದುರಸ್ತಿ ಕಾರ್ಯವನ್ನು ಬೆಂಗಳೂರು ಜಲಮಂಡಳಿಯು ಕೈಗೊಂಡಿದೆ.ಮಂಡಳಿಯ ತಜ್ಞರ ತಂಡದಿಂದ ತಾಂತ್ರಿಕ ದೋಷ ಸರಿಪಡಿಸುವ ಕೆಲಸ ನಡೆಯುತ್ತಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ 12:30ರಿಂದ ಮಧ್ಯಾಹ್ನ 3ರವರೆಗೆ ಕಾವೇರಿ ನೀರು ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.