ಗುರುವಾರ , ಅಕ್ಟೋಬರ್ 1, 2020
22 °C

ಬೆಂಗಳೂರಿನಲ್ಲಿ ಒಂದೂವರೆ ಲಕ್ಷ ಸೋಂಕಿತರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಸೋಮವಾರ 2,942 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸಂಖ್ಯೆ 1,50,523ಕ್ಕೆ ಏರಿದೆ.

ಹೊಸದಾಗಿ 2,935 ಕೋವಿಡ್-19 ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಈ ಮೂಲಕ ಸೋಂಕಿನಿಂದ ಗುಣಮುಖರಾದ ಒಟ್ಟು ಸಂಖ್ಯೆ 1,08,642ಕ್ಕೆ ಏರಿದೆ. ಅಂದರೆ, ಚೇತರಿಕೆಯ ಪ್ರಮಾಣ ಶೆ 71.62ರಷ್ಟಿದೆ.

ಸೋಮವಾರ ಸೋಂಕಿನಿಂದ 33 ಪುರುಷರು ಮತ್ತು 15 ಮಹಿಳೆಯರು ಸೇರಿದಂತೆ 48 ಮಂದಿ ಮೃತಪಟ್ಟಿದ್ದಾರೆ. ಸಾವಿನ ಪ್ರಮಾಣ ಶೇ.1.47 ರಷ್ಟಿದೆ. 

ಸಕ್ರಿಯ ಪ್ರಕರಣಗಳ ಪೈಕಿ, 39,669 ಸೋಂಕಿತರು ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳು ಮತ್ತು ಮನೆಯಲ್ಲಿ ಚಿಕಿತ್ಸೆ ಹಾಗೂ ಆರೈಕೆಯಲ್ಲಿದ್ದಾರೆ. 265 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಸೋಮವಾರ 22,713 ಜನರನ್ನು ತಪಾಸಣೆಗೆ ಒಳಪಡಿಸಲಾಗಿದ್ದು ಈವರೆಗೆ 10,60,813 ಮಂದಿಗೆ ಕೋವಿಡ್‌ ಪರೀಕ್ಷೆ ಮಾಡಲಾಗಿದೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು