ಗುರುವಾರ , ಮೇ 6, 2021
25 °C

ಬೆಂಗಳೂರು ನಗರ ವಿವಿ: ಪರೀಕ್ಷೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಇದೇ 21ರಿಂದ ನಡೆಯಬೇಕಾದ ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಎಲ್ಲ ಪರೀಕ್ಷೆಗಳನ್ನು ಕೋವಿಡ್‌ ಎರಡನೇ ಅಲೆ ತೀವ್ರಗೊಂಡಿರುವುದರಿಂದ ಮತ್ತು ಸಾರಿಗೆ ನೌಕರರ ಮುಷ್ಕರದ ಕಾರಣಕ್ಕೆ ಮುಂದೂಡಲಾಗಿದೆ’ ಎಂದು ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ರಮೇಶ್ ಬಿ. ತಿಳಿಸಿದ್ದಾರೆ.

’ಇದೇ 21ರಿಂದ ಆರಂಭವಾಗಬೇಕಿದ್ದ ಎಂಸಿಎ ಕೋರ್ಸ್‌ (3ನೇ ಮತ್ತು 5ನೇ ಸೆಮಿಸ್ಟರ್‌) ಮತ್ತು ಎಂ.ಇಡಿ (3ನೇ ಸೆಮಿಸ್ಟರ್‌) ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೂ ಮುಂದೂಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಮುಂದೆ ಪ್ರಕಟಿಸಲಾಗುವುದು’ ಎಂದೂ ಅವರು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು