ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ 18ಕ್ಕೆ

Last Updated 14 ಫೆಬ್ರುವರಿ 2020, 12:11 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಇದೇ 18 ರಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾ ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ ಎಂದು ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿ.ಮುನಿರಾಜು ಅವರು ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರದ (ಎಸ್‌ಟಿಆರ್‌ಆರ್‌) ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಜಿಲ್ಲಾ ಪಂಚಾಯಿತಿಯಲ್ಲಿ ಬಿಜೆಪಿಯ 24, ಕಾಂಗ್ರೆಸ್‌ನ 21, ಜೆಡಿಎಸ್‌ನ 5 ಸದಸ್ಯರಿದ್ದಾರೆ. ಉಪಚುನಾವಣೆ ಸಂದರ್ಭದಲ್ಲಿ ನಾಲ್ವರು ಕಾಂಗ್ರೆಸ್ ಸದಸ್ಯರು ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದಾರೆ. ಈ ಸ್ಥಾನಕ್ಕೆ ಸದಸ್ಯ ಮರಿಸ್ವಾಮಿ ಆಯ್ಕೆಯಾಗುವ ಸಾಧ್ಯತೆ ಇದೆ. ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾಗುವವರಿಗೆ ಒಂದು ವರ್ಷ ಅಧಿಕಾರಾವಧಿ ಇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT