ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಸುದ್ದಿಗೋಷ್ಠಿ ವೇಳೆ ಕಾಂಗ್ರೆಸ್‌ ಕಾರ್ಯಕರ್ತ ಹೃದಯಸ್ತಂಭನದಿಂದ ಸಾವು

Published 19 ಆಗಸ್ಟ್ 2024, 11:14 IST
Last Updated 19 ಆಗಸ್ಟ್ 2024, 11:14 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ವಿರೋಧಿಸಿ ಸುದ್ದಿಗೋಷ್ಠಿ ನಡೆಸುವ ವೇಳೆ ಹೃದಯಸ್ತಂಭನದಿಂದ ಕಾಂಗ್ರೆಸ್ ಕಾರ್ಯಕರ್ತ ಸಿ.ಕೆ.ರವಿಚಂದ್ರನ್‌ ಮೃತಪಟ್ಟಿದ್ದಾರೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಸಂಘ ಸೋಮವಾರ ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ಆಯೋಜಿಸಿತ್ತು. ಈ ವೇಳೆ ವೇದಿಕೆಯಲ್ಲಿದ್ದವರನ್ನು ಪರಿಚಯಿಸುತ್ತಿದ್ದ ರವಿಚಂದ್ರನ್ ಅವರು ಏಕಾಏಕಿ ಕುರ್ಚಿಯಿಂದ ಕೆಳಗೆ ಬಿದ್ದರು. ಅವರ ಮೂಗಿನಿಂದ ರಕ್ತಸ್ರಾವವಾಯಿತು. ಪತ್ರಕರ್ತರು ಅವರನ್ನು ಮೇಲಕ್ಕೆ ಎತ್ತಿದರು. ಪ್ರಜ್ಞೆ ತಪ್ಪಿದ್ದ ಅವರನ್ನು ಆಂಬುಲೆನ್ಸ್‌ನಲ್ಲಿ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆ ತಲುಪುವ ಮುನ್ನವೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ಘೋಷಿಸಿದರು.

ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಮೃತದೇಹವವನ್ನು ಹಸ್ತಾಂತರಿಸಲಾಯಿತು. ಉತ್ತರಹಳ್ಳಿಯಲ್ಲಿ ಮಂಗಳವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಕೋಲಾರ ಜಿಲ್ಲೆಯವರಾದ ರವಿಚಂದ್ರನ್ ಅವರು ನಗರದ ಉತ್ತರಹಳ್ಳಿಯಲ್ಲಿ ವಾಸವಾಗಿದ್ದರು. ಅವರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ.  

‘ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿನ ಈ ಹೋರಾಟದಲ್ಲಿ ನಮ್ಮ ಜೊತೆಯಾಗಿದ್ದ ರವಿಚಂದ್ರನ್ ಅವರ ನಿಧನ ನೋವುಂಟು ಮಾಡಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT