ಮಂಗಳವಾರ, ಆಗಸ್ಟ್ 4, 2020
25 °C

ಬೆಂಗಳೂರು: ಮಾಸ್ಕ್ ನೀಡುವಂತೆ ಪೌರ ಕಾರ್ಮಿಕರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 'ಕಂಟೈನ್‌ಮೆಂಟ್ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗೆ ಮಾಸ್ಕ್ ನೀಡಬೇಕು ಹಾಗೂ ಸೂಕ್ತ ಭದ್ರತೆ ನೀಡಬೇಕು' ಎಂದು ಆಗ್ರಹಿಸಿ ಪೌರ ಕಾರ್ಮಿಕರು ಇಂದಿರಾಗಾಂಧಿ ಸಂಗೀತ ಕಾರಂಜಿ ಉದ್ಯಾನ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಸುತ್ತಿರುವ ಕಾರ್ಮಿಕರು, 'ಸುರಕ್ಷಾ ಕವಚ ನೀಡಬೇಕು. ಕಂಟೈನ್‌ಮೆಂಟ್ ಪ್ರದೇಶಗಳಲ್ಲಿ ಸಿಲುಕಿರುವ ಕಾರ್ಮಿಕರು ಕೆಲಸಕ್ಕೆ ಬಾರದಿದ್ದರೆ, ಅವರಿಗೆ ಪೂರ್ತಿ ಸಂಬಳ ನೀಡಬೇಕು. ಸಂಬಳವನ್ನು ನೇರವಾಗಿ ಕಾರ್ಮಿಕರಿಗೆ ಪಾವತಿ ಮಾಡಬೇಕು' ಎಂದು ಆಗ್ರಹಿಸುತ್ತಿದ್ದಾರೆ.

'ಕೊರೊನಾ ಬಂದಾಗಿನಿಂದ ಜೀವವನ್ನು ಕೈಯಲ್ಲಿ ಹಿಡಿದು ಕೆಲಸ ಮಾಡುತ್ತಿದ್ದೇವೆ. ಮೂಲ ಸೌಕರ್ಯವೂ ನಮಗಿಲ್ಲ. ಕುಡಿಯುವ ನೀರು ಸಹ ಮನೆಯಿಂದ ತರುತ್ತಿದ್ದೇವೆ' ಎಂದು ಕಾರ್ಮಿಕ ಮಹಿಳೆ ಲಕ್ಷ್ಮಿ ಅಳಲು ತೋಡಿಕೊಂಡರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು