ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಕೋವಿಡ್-19: 500ರ ಗಡಿ ದಾಟಿದ ಸಾವು

2,344 ಮಂದಿಗೆ ಸೋಂಕು: ಕೋವಿಡ್ ಪೀಡಿತರ ಸಂಖ್ಯೆ 25,288ಕ್ಕೆ ಏರಿಕೆ
Last Updated 16 ಜುಲೈ 2020, 21:25 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕಿತರಲ್ಲಿ ಮತ್ತೆ 70 ಮಂದಿ ಮೃತ‍ಪಟ್ಟಿರುವುದು ಗುರುವಾರ ದೃಢಪಟ್ಟಿದ್ದು, ಕೋವಿಡ್‌ಗೆ ಸಾವಿಗೀಡಾದವರ ಸಂಖ್ಯೆ 500ರ ಗಡಿ (507) ದಾಟಿದೆ.

ನಗರದಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಿದ ಬೆನ್ನಲ್ಲೇ ಪ್ರಕರಣಗಳ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿದೆ. ಹೊಸದಾಗಿ 2,344 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 25,288ಕ್ಕೆ ಏರಿಕೆಯಾಗಿದೆ. 16 ದಿನಗಳಲ್ಲಿ 20,733 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಇದೇ ಅವಧಿಯಲ್ಲಿ 412 ಮಂದಿ ಮೃತಪಟ್ಟಿದ್ದಾರೆ. 18,828 ಸೋಂಕಿತರು ಆಸ್ಪತ್ರೆಗಳು, ಕೋವಿಡ್ ಆರೈಕೆ ಕೇಂದ್ರಗಳು ಹಾಗೂ ಮನೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಮರಣ ಪ್ರಕರಣಗಳಲ್ಲಿ 20 ವರ್ಷದ ಯುವಕ ಸೇರಿದಂತೆ 18 ಮಂದಿ 50 ವರ್ಷದೊಳಗಿನವರು. 50 ವರ್ಷ ಮೇಲ್ಪಟ್ಟವರಲ್ಲಿ ಬಹುತೇಕರು ಮಧುಮೇಹ, ಬಿ.ಪಿ ಸೇರಿದಂತೆ ವಿವಿಧ ಸಮಸ್ಯೆಗಳಿಂದ ಬಳಲುತ್ತಿದ್ದರು. 317 ರೋಗಿಗಳ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗುರುವಾರ 497 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

10 ಮಂದಿಗೆ ಸೋಂಕು: ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಅಧಿಕಾರಿಗಳು ಸೇರಿ 10 ಮಂದಿಗೆ ಸೋಂಕು ತಗುಲಿದೆ. ಮೂರನೇ ಒಂದರಷ್ಟು ಸಿಬ್ಬಂದಿಗೆ ಮಾತ್ರ ಕರ್ತವ್ಯಕ್ಕೆ ಹಾಜರಾಗಲು ಸೂಚಿಸಿದ್ದೇವೆ’ ಎಂದು ವಿ.ವಿ ಕುಲಪತಿ ಡಾ.ಎಸ್. ಸಚ್ಚಿದಾನಂದ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT