ಬುಧವಾರ, ಆಗಸ್ಟ್ 5, 2020
26 °C

ಬೆಂಗಳೂರು | ಬ್ಯಾಂಕ್ ಲಾಕರ್‌ನಲ್ಲಿದ್ದ 1.73 ಕೆ.ಜಿ ಚಿನ್ನಾಭರಣ ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜಯನಗರ ಬಳಿಯ ಬ್ಯಾಂಕ್ ಆಫ್‌ ಬರೋಡಾ ಶಾಖೆಯ ಲಾಕರ್‌ನಲ್ಲಿದ್ದ 1.73 ಕೆ.ಜಿ ತೂಕದ ಚಿನ್ನಾಭರಣ ಕಳವಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

‘ಚಿನ್ನಾಭರಣ ಕಳವು ಸಂಬಂಧ ಶಿವಪ್ರಸಾದ್ ಎಂಬುವರು ದೂರು ನೀಡಿದ್ದಾರೆ’ ಎಂದು ಜಯನಗರ ಪೊಲೀಸರು ಹೇಳಿದರು.

‘ಶಿವಪ್ರಸಾದ್ ಅವರು ₹85 ಲಕ್ಷ ಮೌಲ್ಯದ 1.73 ಕೆ.ಜಿ ಚಿನ್ನಾಭರಣವನ್ನು ಫೆಬ್ರುವರಿಯಲ್ಲಿ ಬ್ಯಾಂಕ್ ಲಾಕರ್‌ನಲ್ಲಿ ಇರಿಸಿದ್ದರು. ಜುಲೈ 22ರಂದು ಬ್ಯಾಂಕ್ ಲಾಕರ್ ತೆರೆಸಿ ನೋಡಿದಾಗ ಚಿನ್ನಾಭರಣ ಕಳ್ಳತನವಾಗಿರುವುದು ಗಮನಕ್ಕೆ ಬಂದಿದೆ. ಗಾಬರಿಗೊಂಡ ಶಿವಪ್ರಸಾದ್, ಬ್ಯಾಂಕ್ ಸಿಬ್ಬಂದಿಯನ್ನು ಪ್ರಶ್ನಿಸಿದಾಗ ಉತ್ತರ ಸಿಕ್ಕಿಲ್ಲ. ಹೀಗಾಗಿ, ಠಾಣೆಗೆ ದೂರು ನೀಡಿದ್ದಾರೆ. ಬ್ಯಾಂಕ್‌ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿ ಹೇಳಿಕೆ ಪಡೆದು ತನಿಖೆ ಮುಂದುವರಿಸಲಾಗಿದೆ’ ಎಂದೂ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು