ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಜಾಮೀನಿನ ಮೇಲೆ ಹೊರ ಬಂದು ಮತ್ತೆ ಕಳ್ಳತನ; ಬಂಧನ

Published 3 ಸೆಪ್ಟೆಂಬರ್ 2024, 16:02 IST
Last Updated 3 ಸೆಪ್ಟೆಂಬರ್ 2024, 16:02 IST
ಅಕ್ಷರ ಗಾತ್ರ

ಬೆಂಗಳೂರು: ಹಗಲು ವೇಳೆ ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಮಾರತ್‌ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹಳೇ ಗುಡ್ಡದಹಳ್ಳಿ ನಿವಾಸಿ ನಾಗರಾಜ್‌ ಬಂಧಿತ.

ಆರೋಪಿಯಿಂದ ₹8 ಲಕ್ಷ ಮೌಲ್ಯದ 118 ಗ್ರಾಂ ಚಿನ್ನಾಭರಣ, 203 ಗ್ರಾಂ ಬೆಳ್ಳಿ ಸಾಮಗ್ರಿ ಹಾಗೂ ಒಂದು ಬೈಕ್ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

‘ಆರೋಪಿ ಈ ಹಿಂದೆಯೂ ಕಳ್ಳತನ ಪ್ರಕರಣವೊಂದರಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ. ಜಾಮೀನಿನ ಮೇಲೆ ಬಿಡುಗಡೆಯಾಗಿ ಕೆಲವೇ ದಿನಗಳಲ್ಲಿ ಎನ್‌.ಟಿ.ಆರ್ ಲೇಔಟ್‌ನ ಗುತ್ತಿಗೆದಾರರ ಮನೆಯಲ್ಲಿ ಕಳ್ಳತನ ನಡೆಸಿದ್ದ. ಅವರು ನೀಡಿದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿ, ಮಾರತ್‌ಹಳ್ಳಿಯ ಸೇತುವೆ ಬಳಿ ಬೈಕ್‌ನಲ್ಲಿ ತೆರಳುತ್ತಿದ್ಧಾಗ ಆರೋಪಿಯನ್ನು ಬಂಧಿಸಲಾಯಿತು’ ಎಂದು ಪೊಲೀಸರು ಹೇಳಿದರು.

‘ಕದ್ದ ಚಿನ್ನಾಭರಣವನ್ನು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಚಿನ್ನಾಭರಣ ಅಂಗಡಿಗೆ ಮಾರಾಟ ಮಾಡಿದ್ದ. ಅಂಗಡಿ ಮಾಲೀಕರಿಂದ 54 ಗ್ರಾಂ ಚಿನ್ನಾಭರಣವನ್ನು ಜಪ್ತಿ ಮಾಡಲಾಗಿದೆ’ ಎಂದು ಹೇಳಿದರು.

‘ಆರೋಪಿ ಬಂಧನದಿಂದ ಮಾರತ್‌ಹಳ್ಳಿ, ಆನೇಕಲ್‌, ಕೋಣನಕುಂಟೆ, ಸೂರ್ಯನಗರ ವ್ಯಾಪ್ತಿಯಲ್ಲಿ ನಡೆದ 12 ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಆರು ದಿನ ಪೊಲೀಸ್‌ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT