ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ₹87.56 ಲಕ್ಷ ಮೌಲ್ಯದ ಚಿನ್ನ ಜಪ್ತಿ

ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ ₹ 87.56 ಲಕ್ಷ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಲಾಗಿದೆ.
ಏರ್ ಇಂಟಲಿಜೆನ್ಸ್ ಅಧಿಕಾರಿಗಳು ನೀಡಿದ್ದ ಸುಳಿವು ಮೇರೆಗೆ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು.
'ವಸ್ತುವಿನ ಜೊತೆಯಲ್ಲಿ ಚಿನ್ನವನ್ನು ಬಚ್ಚಿಡಲಾಗಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಪರಿಶೀಲನೆ ನಡೆಸಿ ಚಿನ್ನ ಜಪ್ತಿ ಮಾಡಲಾಗಿದೆ' ಎಂದು ಕಸ್ಟಮ್ಸ್ ಅಧಿಕಾರಿಯೊಬ್ಬರು ಹೇಳಿದರು.
'ನ. 27ರಂದು ಈ ಕಾರ್ಯಾಚರಣೆ ನಡೆಸಲಾಗಿದೆ. ಚಿನ್ನ ಸಾಗಣೆ ಮಾಡುತ್ತಿದ್ದ ಎನ್ನಲಾದ ವ್ಯಕ್ತಿ ವಿಚಾರಣೆ ನಡೆಸಲಾಗುತ್ತಿದೆ' ಎಂದೂ ಹೇಳಿದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.