ಬೆಂಗಳೂರು: ಎಚ್ಎಎಲ್ನ ಅಪಾರ್ಟ್ಮೆಂಟ್ವೊಂದರ 10ನೇ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎಚ್ಎಎಲ್ ನಿವಾಸಿ ವರ್ಷಾ (18) ಆತ್ಮಹತ್ಯೆ ಮಾಡಿಕೊಂಡವರು.

ಎಚ್ಎಎಲ್ನ ಕುಂದಲಹಳ್ಳಿ ಕಾಲೊನಿಯ ಅಪಾರ್ಟ್ಮೆಂಟ್ವೊಂದರ ಮೊದಲ ಮಹಡಿಯಲ್ಲಿ ಪೋಷಕರ ಜೊತೆಗೆ ವರ್ಷಾ ವಾಸವಿದ್ದರು. ತಂದೆ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದರೆ, ತಾಯಿ ದಂತ ವೈದ್ಯೆಯಾಗಿ ಕೆಲಸ ಮಾಡುತ್ತಿದ್ದಾರೆ. ವರ್ಷಾ, ಪಿಯು ಮುಗಿಸಿ ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಶಿಕ್ಷಣ ಪಡೆಯಲು ಮುಂದಾಗಿದ್ದರು. ಗುರುವಾರ ತಡರಾತ್ರಿ ಅಪಾರ್ಟ್ಮೆಂಟ್ನ ಮೊದಲ ಮಹಡಿಯಿಂದ 10ನೇ ಮಹಡಿಗೆ ನಡೆದು ತೆರಳಿದ್ದರು. ಅಲ್ಲಿಂದ ಕೆಳಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.

ಎಚ್ಎಎಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಪೋಷಕರಿಗೆ ಹಸ್ತಾಂತರ ಮಾಡಲಾಗಿದೆ. ಎಚ್ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರ್ಷಾ ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ.

ಯಾರ ಮೇಲೂ ಪೋಷಕರು ಅನುಮಾನ ವ್ಯಕ್ತಪಡಿಸಿಲ್ಲ. ಜೊತೆಗೆ, ಮನೆಯಲ್ಲೂ ಯಾವುದೇ ಜಗಳ, ವಾಗ್ವಾದ ನಡೆದಿರಲಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.