ಬೆಂಗಳೂರು: ಮನೆಯ ಬಾಗಿಲು ಒಡೆದು ಚಿನ್ನ ಹಾಗೂ ವಜ್ರದ ಆಭರಣ, ವಿದೇಶಿ ನೋಟು ಕಳ್ಳತನ ಮಾಡಿದ್ದ ಆರೋಪಿಯನ್ನು ಮೈಕೊ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ತಿರುವಣ್ಣಾಮಲೈ ನಿವಾಸಿ ರಾಮಸ್ವಾಮಿ(45) ಬಂಧಿತ.

ಆರೋಪಿಯಿಂದ ₹7.36 ಲಕ್ಷ ಮೌಲ್ಯದ 33 ಗ್ರಾಂ ವಜ್ರ ಹಾಗೂ ಚಿನ್ನದ ಆಭರಣ, 1 ಕೆ.ಜಿ 220 ಗ್ರಾಂ ಬೆಳ್ಳಿಯ ಸಾಮಗ್ರಿ, ವಿದೇಶಿ ನೋಟು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಠಾಣಾ ವ್ಯಾಪ್ತಿಯ ವಿಜಯಾ ಬ್ಯಾಂಕ್ ಲೇಔಟ್ನ ನಿವಾಸಿಯೊಬ್ಬರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

‘ದೂರುದಾರರು ಭೂತಾನ್ ಪ್ರವಾಸಕ್ಕೆ ತೆರಳಿದ್ದರು. ಆ ಸಂದರ್ಭದಲ್ಲಿ ಆರೋಪಿ ಹೊಂಚು ಹಾಕಿ ಮನೆಯ ಬಾಗಿಲು ಒಡೆದು ಒಳಕ್ಕೆ ನುಗ್ಗಿ ಕಳ್ಳತನ ಮಾಡಿಕೊಂಡು ಪರಾರಿ ಆಗಿದ್ದ. ಮನೆಯ ಬಾಗಿಲು ಒಡೆದಿರುವುದನ್ನು ಕೆಲಸದಾಕೆ ಗಮನಿಸಿ ದೂರುದಾರರ ಸಂಬಂಧಿಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಅವರು ಬಂದು ನೋಡಿದಾಗ ಕಳ್ಳತನ ನಡೆದಿರುವುದು ಗೊತ್ತಾಗಿತ್ತು’ ಎಂದು ಪೊಲೀಸರು ಹೇಳಿದರು.

‘ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ 10 ದಿನ ಕಸ್ಟಡಿಗೆ ಪಡೆಯಲಾಗಿದೆ. ಕುಮಾರಸ್ವಾಮಿ ಲೇಔಟ್, ಗಿರಿನಗರ, ಸುಬ್ರಮಣ್ಯಪುರ, ಮಡಿವಾಳ, ರಾಮಮೂರ್ತಿನಗರ, ಬನಶಂಕರಿ, ಸಿ.ಕೆ.ಅಚ್ಚುಕಟ್ಟು ಹಾಗೂ ಸುಬ್ರಮಣ್ಯನಗರ ಪೊಲೀಸ್ ಠಾಣೆಗಳ ವ್ಯಾಪ್ತಿಯ ಮನೆಗಳಲ್ಲಿ ಆರೋಪಿ ಈ ಹಿಂದೆ ಕಳ್ಳತನ ಮಾಡಿದ್ದ. ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದ. ದಿನನಿತ್ಯದ ಖರ್ಚಿಗಾಗಿ ಮತ್ತೆ ಕಳ್ಳತನಕ್ಕೆ ಇಳಿದಿದ್ದ’ ಎಂದು ಪೊಲೀಸರು ಹೇಳಿದರು.