ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಗೃಹಿಣಿ ಕೊಲೆ: ಪತಿ ಬಂಧನ

Published : 21 ಸೆಪ್ಟೆಂಬರ್ 2024, 23:52 IST
Last Updated : 21 ಸೆಪ್ಟೆಂಬರ್ 2024, 23:52 IST
ಫಾಲೋ ಮಾಡಿ
Comments

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಗೃಹಿಣಿಯೊಬ್ಬರ ಕೊಲೆ ಮಾಡಲಾಗಿದ್ದು, ಕೊಲೆ ಆರೋಪದ ಅಡಿ ಅವರ ಪತಿಯನ್ನು ಮೈಕೊ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಿಟಿಎಸ್ ಲೇಔಟ್ ನಿವಾಸಿ ಸಮೀರಾ(40) ಕೊಲೆಯಾದ ಗೃಹಿಣಿ. ಅವರ ಪತಿ ಸೈಯದ್ ಜಮೀರ್ ಎಂಬುವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

‘ಪೇಟಿಂಗ್ ಕೆಲಸ ಮಾಡುತ್ತಿದ್ದ ಸೈಯದ್ ಜಮೀರ್ ಅವರು, 15 ವರ್ಷದ ಹಿಂದೆ ಸಮೀರಾ ಅವರನ್ನು ಮದುವೆ ಆಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕೆಲವು ದಿನಗಳಿಂದ ದಂಪತಿ ನಡುವೆ ಕೌಟುಂಬಿಕ ವಿಚಾರವಾಗಿ ಜಗಳ ನಡೆಯುತ್ತಿತ್ತು. ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಮದ್ಯ ಅಮಲಿನಲ್ಲಿದ್ದ ಆರೋಪಿ, ಪತ್ನಿ ಜತೆಗೆ ಜಗಳ ಮಾಡಿದ್ಧಾರೆ. ಅದು ವಿಕೋಪಕ್ಕೆ ಹೋದಾಗ, ಪತ್ನಿಯ ಕುತ್ತಿಗೆ ಬಿಗಿದು ಕೊಲೆ ಮಾಡಿ ಪರಾರಿಯಾಗಿದ್ದರು’ ಎಂದು ಪೊಲೀಸರು ಹೇಳಿದರು.

ವಿಷಯ ತಿಳಿದು ಸ್ಥಳಕ್ಕೆ ಬಂದ ಸಮೀರಾ ಸಹೋದರ ಮೈಕೊ ಲೇಔಟ್ ಠಾಣೆಗೆ ದೂರು ನೀಡಿದ್ದರು. ನಡೆಸಿ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಶನಿವಾರ ಬೆಳಿಗ್ಗೆ ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT