ಗುರುವಾರ , ನವೆಂಬರ್ 14, 2019
19 °C

ಬೆಂಗಳೂರು : ಅಪರಿಚಿತ ದುಷ್ಕರ್ಮಿಗಳಿಂದ ದಂಪತಿ ಹತ್ಯೆ

Published:
Updated:

ಬೆಂಗಳೂರು: ಅಪರಿಚಿತ ದುಷ್ಕರ್ಮಿಗಳು ದಂಪತಿಯನ್ನು ಹತ್ಯೆ ಮಾಡಿದ ಘಟನೆ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಗರುಡಾಚಾರ್ ಪಾಳ್ಯದ ಆರ್ ಎಚ್ ಬಿ ಕಾಲೊನಿಯ ಚಂದ್ರೇಗೌಡ (63) ಮತ್ತು ಅವರ ಪತ್ನಿ ಲಕ್ಷ್ಮಮ್ಮ (55) ಕೊಲೆಯಾದವರು. ಮನೆಯ ಒಳಗೆ ಇಬ್ಬರ ಮೃತದೇಹ ಗುರುವಾರ ಬೆಳಿಗ್ಗೆ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಜ್ಞರ ತಂಡ ಮತ್ತು ಶ್ವಾನದಳ ತೆರಳಿ ಪರಿಶೀಲನೆ ನಡೆಸಿದೆ. ದುಷ್ಕರ್ಮಿಗಳ ಪತ್ತೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ವೈಟ್ ಫೀಲ್ಡ್ ವಿಭಾಗದ ಪೊಲೀಸರು ತಿಳಿಸಿದರು.

ಪ್ರತಿಕ್ರಿಯಿಸಿ (+)