ಬೆಂಗಳೂರು: ಕೊಲೆಯ ಅನುಮಾನದ ಮೇರೆಗೆ, ಅಂತ್ಯಸಂಸ್ಕಾರ ಮಾಡಿದ್ದ ಶವವನ್ನು ಹೊರತೆಗೆದು ಮರು ತನಿಖೆ ನಡೆಸಿರುವ ಪ್ರಕರಣ ಎಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಯೂನೆಸ್ ಎಂಬುವರು ತಮ್ಮ ಸಹೋದರ ಇಮ್ತಿಯಾಜ್ (40) ಅವರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದರು. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಮರು ತನಿಖೆ ನಡೆಸಲಾಗುತ್ತಿದೆ. ಮೃತದೇಹವನ್ನು ಹೊರಕ್ಕೆ ತೆಗೆದು ಮಾದರಿಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್ಎಸ್ಎಲ್) ರವಾನೆ ಮಾಡಲಾಗಿದೆ. ವರದಿ ಬಂದ ಬಳಿಕ ಅದು ಕೊಲೆಯೇ ಅಥವಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆಯೇ ಎಂಬುದು ಗೊತ್ತಾಗಲಿದೆ ಎಂದು ಪೊಲೀಸರು ಹೇಳಿದರು.

‘ಪತಿ ಇಮ್ತಿಯಾಜ್ ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂದು ಅವರ ಪತ್ನಿ ನಸೀರಾಬಾನು ಕುಟುಂಬದ ಸದಸ್ಯರಿಗೆ ಹೇಳಿ ತರಾತುರಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಿದ್ದರು. ಅದಾದ ಕೆಲವು ದಿನ ಕಳೆದ ಮೇಲೆ ನಸೀರಾಬಾನು ಅವರು ಮನೆ ಕೆಲಸಕ್ಕೆ ತೆರಳುತ್ತಿದ್ದರು’ ಎಂದು ಪೊಲೀಸರು ಹೇಳಿದರು.

‘ಈ ನಡುವೆ, ಯೂನೆಸ್ ಅವರು ಅಣ್ಣನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದರು. ಸಹೋದರನ ಪತ್ನಿ ನಸೀರಾಬಾನು ಹಾಗೂ ಅವರ ಸ್ನೇಹಿತನ ವಿರುದ್ಧ ದೂರು ನೀಡಿದ್ದರು. ಈ ಬಗ್ಗೆ ತಹಶೀಲ್ದಾರ್ ಆದೇಶದ ಮೇರೆಗೆ ಹೂತಿಟ್ಟ ಶವ ಹೊರತೆಗೆದಿರುವ ಎಚ್ಎಎಲ್ ಠಾಣೆ ಪೊಲೀಸರು ಪ್ರಕರಣದ ಮರು ತನಿಖೆ ನಡೆಸುತ್ತಿದ್ದಾರೆ’ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.