ಶನಿವಾರ, ಆಗಸ್ಟ್ 13, 2022
26 °C

ಕಾರು ಚಾಲಕನಿಗೆ ಕೋವಿಡ್‌: ಪೊಲೀಸ್ ಕಮಿಷನರ್ ಭಾಸ್ಕರ್ ರಾವ್‌ ಕ್ವಾರಂಟೈನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರ ಕಾರು ಚಾಲಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಭಾಸ್ಕರ್ ರಾವ್ ಅವರು ಸದ್ಯ ಹೋಂ ಕ್ವಾರಂಟೈನ್‌ನಲ್ಲಿ ಇದ್ದಾರೆ‌.

ಪೊಲೀಸರಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ, ಕಮಿಷನರ್ ಕಚೇರಿ ಸಿಬ್ಬಂದಿಯನ್ನು ಸಾಮೂಹಿಕವಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು. 9 ಸಿಬ್ಬಂದಿ ಹಾಗೂ ಗೃಹ ರಕ್ಷಕಿಗೆ ಸೋಂಕು ದೃಢಪಟ್ಟಿತ್ತು. ಇದೀಗ, ಕಮಿಷನರ್ ಕಾರು ಚಾಲಕನ ವರದಿ ಪಾಸಿಟಿವ್ ಬಂದಿದೆ.

ಮುಂಜಾಗ್ರತಾ ಕ್ರಮವಾಗಿ ಕಮಿಷನರ್ ಅವರು ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದಾರೆ. ಇದು ಅವರ ಐದನೇ ಪರೀಕ್ಷೆ ಆಗಿದೆ. ವಲಸೆ ಕಾರ್ಮಿಕರನ್ನು ಊರಿಗೆ ಕಳುಹಿಸುವಾಗ, ಪಾದರಾಯನಪುರ ಗಲಾಟೆ ಸೇರಿದಂತೆ ಹಲವು ಕಡೆ ಕಮಿಷನರ್ ಭೇಟಿ ನೀಡಿದ್ದರು. ಅಲ್ಲೆಲ್ಲ ಹಲವರಿಗೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ, ಕಮಿಷನರ್ ಪರೀಕ್ಷೆಗೆ ಒಳಪಟ್ಟಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು